Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:12 - ಕನ್ನಡ ಸತ್ಯವೇದವು C.L. Bible (BSI)

12 ಆಗ ಯೆರೆಮೀಯನು ಬೆನ್ಯಾಮೀನ್ ನಾಡಿನಲ್ಲಿ ತನಗೆ ಬರಬೇಕಾಗಿದ್ದ ಸೊತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಜೆರುಸಲೇಮಿನಿಂದ ಅಲ್ಲಿಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತನಗೆ ಬರಬೇಕಾದ ಸ್ವಾಸ್ತ್ಯವನ್ನು ಜನರ ಸಮಕ್ಷಮ ತೆಗೆದುಕೊಳ್ಳಲು ಯೆರೂಸಲೇವಿುನಿಂದ ಅಲ್ಲಿಗೆ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆರೆಮೀಯನು ಜೆರುಸಲೇಮಿನಿಂದ ಬೆನ್ಯಾಮೀನ್ ಪ್ರದೇಶಕ್ಕೆ ಹೋಗ ಬಯಸಿದನು. ತನ್ನ ಮನೆತನಕ್ಕೆ ಸೇರಿದ ಆಸ್ತಿಯ ವಿಭಜನೆಗಾಗಿ ಅವನು ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆರೆಮೀಯನು ಬೆನ್ಯಾಮೀನನ ದೇಶಕ್ಕೆ ಹೋಗುವುದಕ್ಕೂ, ಜನರ ಮಧ್ಯದಿಂದ ತನ್ನ ಪಾಲನ್ನು ತೆಗೆದುಕೊಳ್ಳುವುದಕ್ಕೂ ಯೆರೂಸಲೇಮಿನಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:12
11 ತಿಳಿವುಗಳ ಹೋಲಿಕೆ  

ಇವು ಯೆರೆಮೀಯನ ಪ್ರವಚನಗಳು. ಈತ ಬೆನ್ಯಮೀನ್ ಪ್ರಾಂತ್ಯಕ್ಕೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನು. ಇವನ ತಂದೆ ಹಿಲ್ಕೀಯನು.


ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.


ಅದಕ್ಕೆ ನಾನು, “ನನ್ನಂಥ ಗಂಡು ಓಡಿಹೋಗಿ ಅವಿತುಕೊಳ್ಳುವುದು ಸರಿಯೇ? ಇದಲ್ಲದೆ ಪ್ರಾಣರಕ್ಷಣೆಗಾಗಿ ಗರ್ಭಗುಡಿಯನ್ನು ನಾನು ಪ್ರವೇಶಿಸಬಹುದೇ? ಇಲ್ಲ, ನಾನು ಬರುವುದಿಲ್ಲ,” ಎಂದು ಉತ್ತರಕೊಟ್ಟೆ.


ಬೆನ್ಯಾಮೀನ್ಯರ ಪ್ರದೇಶದಲ್ಲಿ ಫಲವತ್ತಾದ ಪ್ರದೇಶಗಳನ್ನು ಒಳಗೊಂಡ ಪಟ್ಟಣಗಳು ಅಂದರೆ ಗೆಬ, ಅಲೆಮೆತ್, ಅನಾತೋತ್ ಈ ಪಟ್ಟಣಗಳನ್ನು ಅವರಿಗೆ ಕೊಡಲಾಗಿತ್ತು. ಅವರೆಲ್ಲರ ಕುಟುಂಬಗಳ ವಾಸಕ್ಕಾಗಿ ಒಟ್ಟು ಹದಿಮೂರು ಪಟ್ಟಣಗಳು ದೊರೆತವು.


ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಸರ್ವೇಶ್ವರನಿಂದ, “ಎಲೀಯನೇ, ಇಲ್ಲೇನು ಮಾಡುತ್ತಿರುವೆ?” ಎಂಬ ವಾಣಿ ಕೇಳಿಸಿತು.


ಅವನು ಅದನ್ನು ಕೇಳಿದೊಡನೆ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಜುದೇಯದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬೀಳ್ಕೊಟ್ಟನು.


ಬಾಬಿಲೋನಿಯದ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಜೆರುಸಲೇಮನ್ನು ಬಿಟ್ಟುಹೋಯಿತು.


ದೂರ, ಬಲುದೂರ ಹಾರಿ ಹೋಗುತ್ತಿದ್ದೆ I ನಿರ್ಜನ ಪ್ರದೇಶದಲಿ ವಾಸಿಸುತ್ತಿದ್ದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು