ಯೆರೆಮೀಯ 37:15 - ಕನ್ನಡ ಸತ್ಯವೇದವು C.L. Bible (BSI)15 ಆ ಅಧಿಕಾರಿಗಳು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ಅಧಿಕಾರಿಗಳು ಯೆರೆಮೀಯನ ಮೇಲೆ ತುಂಬಾ ಕೋಪಗೊಂಡರು. ಯೆರೆಮೀಯನನ್ನು ಹೊಡೆಯಬೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ ಅವರು ಯೆರೆಮೀಯನನ್ನು ಸೆರೆಮನೆಯಲ್ಲಿಟ್ಟರು. ಆ ಸೆರೆಮನೆಯು ಯೆಹೋನಾಥಾನನೆಂಬುವನ ಮನೆಯಲ್ಲಿತ್ತು. ಯೆಹೋನಾಥಾನನು ಯೆಹೂದದ ರಾಜನ ಲಿಫಿಗಾರನಾಗಿದ್ದನು. ಯೆಹೋನಾಥಾನನ ಮನೆಯನ್ನು ಸೆರೆಮನೆಯನ್ನಾಗಿ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು. ಅಧ್ಯಾಯವನ್ನು ನೋಡಿ |