Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:2 - ಕನ್ನಡ ಸತ್ಯವೇದವು C.L. Bible (BSI)

2 ಆದರೆ ಚಿದ್ಕೀಯನಾಗಲಿ, ಅವನ ಸೇವಕರಾಗಲಿ, ನಾಡಿನ ಜನರಾಗಲಿ ಸರ್ವೇಶ್ವರನು ಪ್ರವಾದಿ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವನಾಗಲಿ, ಅವನ ಸೇವಕರಾಗಲಿ ಅಥವಾ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನಾಗಲಿ ಅವನ ಸೇವಕರಾಗಲಿ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಯೆಹೋವನು ಯೆರೆಮೀಯನಿಗೆ ಪ್ರವಾದನೆ ಮಾಡಲು ಹೇಳಿದ ಸಂದೇಶಗಳ ಕಡೆಗೆ ಗಮನ ಕೊಡಲಿಲ್ಲ. ಚಿದ್ಕೀಯನ ಸೇವಕರು ಮತ್ತು ಯೆಹೂದದ ಜನರು ಯೆಹೋವನ ಸಂದೇಶಗಳಿಗೆ ಯಾವ ಗಮನವನ್ನೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಅವನೂ ಅವನ ಸೇವಕರೂ ದೇಶದ ಜನರೂ ಯೆಹೋವ ದೇವರ ಪ್ರವಾದಿಯಾದ ಯೆರೆಮೀಯನಿಂದ ಹೇಳಿಸಿದ ವಾಕ್ಯಗಳಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:2
15 ತಿಳಿವುಗಳ ಹೋಲಿಕೆ  

ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.


“ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮತಿಗಳನ್ನು ಹೇಳಿ ಜನರಿಗೆ ಮುನ್ನೆಚ್ಚರಿಕೆ ನೀಡಿದ್ದೇನೆ.


ಇಸ್ರಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ, ನಿನಗೆ ಸಮಯವು ಸಮೀಪಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.


ಮೂಢನನ್ನು ದೂತನನ್ನಾಗಿ ಕಳುಹಿಸುವವನು ತನ್ನ ಕಾಲನ್ನು ತಾನೆ ಕಡಿದುಕೊಳ್ಳುವನು, ತನ್ನ ಕೇಡನ್ನು ತಾನೆ ಕುಡಿಯುವನು.


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.


ಸರ್ವೇಶ್ವರ ಪ್ರವಾದಿಯಾದ ಅಹೀಯನ ಮುಖಾಂತರ ತಿಳಿಸಿದಂತೆ ಎಲ್ಲಾ ಇಸ್ರಯೇಲರು ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.


ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು.


ದಾವೀದನು, “ನಾಹಾಷನು ನನಗೆ ಸ್ನೇಹತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.


ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದನ್ನೆಲ್ಲಾ ಆರೋನ ಮತ್ತು ಅವನ ಮಕ್ಕಳು ಮಾಡಿದರು.


ಅದಕ್ಕೆ ಮೋಶೆ, “ಸ್ವಾಮೀ, ಈ ಕಾರ್ಯಕ್ಕೆ ತಾವು ಬೇರೊಬ್ಬನನ್ನು ನೇಮಿಸಬೇಕು,” ಎನ್ನಲು, ಸರ್ವೇಶ್ವರ ಅವನ ಮೇಲೆ ಸಿಟ್ಟುಗೊಂಡರು.


“ಇಸ್ರಯೇಲರ ದೇವರಾದ ಸರ್ವೇಶ್ವರನಾದ ನನ್ನ ನುಡಿ ಇದು: ನೀನು ಜುದೇಯದ ಅರಸ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆಂದು ಹೇಳು - ‘ಸರ್ವೇಶ್ವರನ ಮಾತನ್ನು ಆಲಿಸು: ಇಗೋ, ನಾನು ಈ ನಗರವನ್ನು ಬಾಬಿಲೋನಿನ ಅರಸನ ಕೈವಶಮಾಡುವೆನು. ಅವನು ಇದನ್ನು ಬೆಂಕಿಯಿಂದ ಸುಟ್ಟುಹಾಕುವನು.


ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು