Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:21 - ಕನ್ನಡ ಸತ್ಯವೇದವು C.L. Bible (BSI)

21 ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ದಿನವಹಿ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:21
35 ತಿಳಿವುಗಳ ಹೋಲಿಕೆ  

ಜೆರುಸಲೇಮ್ ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಈ ಪ್ರಕಾರ ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು. ಬಳಿಕ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆ ಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


“ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು.


ಆ ಸಮಯದಲ್ಲಿ ಬಾಬಿಲೋನಿಯದ ಅರಸನ ಸೈನ್ಯ ಜೆರುಸಲೇಮನ್ನು ಮುತ್ತಿತ್ತು. ಪ್ರವಾದಿ ಯೆರೆಮೀಯನು ಜುದೇಯದ ರಾಜನ ಮನೆಗೆ ಸೇರಿದ ಕಾರಾಗೃಹದಲ್ಲಿ ಸೆರೆಯಾಗಿದ್ದನು.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


ಬರಗಾಲದಲ್ಲಿ ಮರಣದಿಂದ ಕಾಪಾಡುವನು ಯುದ್ಧಕಾಲದಲ್ಲಿ ಕತ್ತಿಯಿಂದ ರಕ್ಷಿಸುವನು.


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ಶುಭಸಂದೇಶದ ನಿಮಿತ್ತ ನಾನು ಸೆರೆಯಾಳಾಗಿದ್ದರೂ ಪ್ರಭುವಿನ ರಾಯಭಾರಿಯಾಗಿದ್ದೇನೆ. ಎಂತಲೇ, ಈ ಶುಭಸಂದೇಶವನ್ನು ಧೈರ್ಯದಿಂದ ಸೂಕ್ತ ರೀತಿಯಲ್ಲಿ ಸಾರಲಾಗುವಂತೆ ನನಗಾಗಿ ಪ್ರಾರ್ಥಿಸಿರಿ.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ಪೌಲನು ತಾನು ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ನೋಡಲು ಬಂದವರನ್ನೆಲ್ಲಾ ಆದರದಿಂದ ಬರಮಾಡಿಕೊಳ್ಳುತ್ತಿದ್ದನು.


ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.


ಹೀಗೆ ಎರಡು ವರ್ಷಗಳು ಕಳೆದವು. ಪೊರ್ಸಿಯ ಫೆಸ್ತ ಎಂಬವನು ಫೆಲಿಕ್ಸನ ಸ್ಥಾನದಲ್ಲಿ ರಾಜ್ಯಪಾಲನಾಗಿ ಬಂದನು. ಫೆಲಿಕ್ಸನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವ ಸಲುವಾಗಿ ಪೌಲನನ್ನು ಸೆರೆಮನೆಯಲ್ಲೇ ಬಿಟ್ಟುಹೋದನು.


ಪೇತ್ರನನ್ನು ಹೀಗೆ ಸೆರೆಯಲ್ಲಿಟ್ಟಿದ್ದಾಗ, ಸಭೆಯು ಅವನಿಗಾಗಿ ಶ್ರದ್ಧೆಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿತ್ತು.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ಒಲೆಯಂತೆ ಸುಡುತ್ತಿದೆ ನಮ್ಮ ಚರ್ಮ ಕ್ಷಾಮಕಾಲದ ಭೀಕರ ಜ್ವರದ ನಿಮಿತ್ತ.


ಸರ್ವೇಶ್ವರನ ಈ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗ ಹನಮೇಲನು ಕಾರಾಗೃಹದ ಅಂಗಳದಲ್ಲಿ ಇದ್ದ ನನ್ನ ಬಳಿಗೆ ಬಂದು, ‘ಬೆನ್ಯಾಮೀನ್ ನಾಡಿನ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ. ಅದಕ್ಕೆ ನೀನೆ ಬಾಧ್ಯನು, ನಿನಗಾಗಿಯೇ ಕೊಂಡುಕೊ’ ಎಂದು ಕೇಳಿಕೊಂಡನು. ಕೂಡಲೆ ಇದು ಸರ್ವೇಶ್ವರನ ನುಡಿ ಎಂದು ನನಗೆ ಗೊತ್ತಾಯಿತು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಮಾನನಷ್ಟವಿರದು ಕಷ್ಟಕಾಲದಲಿ I ಕುಂದುಕೊರತೆಯಿರದು ಬರಗಾಲದಲಿ II


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಸರ್ವೇಶ್ವರ ಎರಡನೆಯ ವಾಕ್ಯವನ್ನು ಅನುಗ್ರಹಿಸಿದರು.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.


ಅವನು ಪ್ರವಾದಿ ಯೆರೆಮೀಯನನ್ನು ಹೊಡೆಯಿಸಿ ಸರ್ವೇಶ್ವರನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲ ಬಳಿಯಲ್ಲಿದ್ದ ಸೆರೆಗೆ ಹಾಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು