Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:7 - ಕನ್ನಡ ಸತ್ಯವೇದವು C.L. Bible (BSI)

7 “ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ - ನನ್ನ ಅಭಿಪ್ರಾಯವನ್ನು ವಿಚಾರಿಸಲು ನಿಮ್ಮನ್ನು ನನ್ನ ಬಳಿಗೆ ಕಳಿಸಿದ ಜುದೇಯದ ಅರಸನಿಗೆ ಹೀಗೆಂದು ಹೇಳಿರಿ: ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶಕ್ಕೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ವಿಚಾರಿಸುವದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ - ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನೆಂದರೆ, ಇಗೋ, ನಿಮ್ಮ ಸಹಾಯಕ್ಕೆ ಹೊರಟ, ‘ಫರೋಹನ ಸೈನ್ಯವು, ಅದರ ಸ್ವದೇಶವಾದ ಈಜಿಪ್ಟಿಗೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:7
22 ತಿಳಿವುಗಳ ಹೋಲಿಕೆ  

ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು.


ಹೀಗಿರುವಲ್ಲಿ ಅರಸ ಚಿದ್ಕೀಯನು ಶೆಲೆಮ್ಯನ ಮಗ ಯೆಹೂಕಲನನ್ನು ಮತ್ತು ಯಾಜಕ ಮಾಸೇಯನ ಮಗ ಚೆಫನ್ಯನನ್ನು ಯೆರೆಮೀಯನ ಬಳಿಗೆ ಕಳಿಸಿ, “ನಮಗಾಗಿ ನಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸು” ಎಂದು ವಿನಂತಿಸಿದನು.


ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.


ತಾನು ಕೇಳಿದ ವಾಕ್ಯಗಳ ವಿಷಯವಾಗಿ ಸರ್ವೇಶ್ವರನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸರಿಗೆ ನೀವು ತಿಳಿಸಬೇಕಾದ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತು ಏನೆಂದರೆ,


ಈಜಿಪ್ಟ್ ಇನ್ನು ಇಸ್ರಯೇಲ್ ವಂಶದವರ ಭರವಸೆಯಾಗದು; ಅದರ ಕಡೆಗೆ ಕಣ್ಣೆತ್ತುವಾಗ ದೇವದ್ರೋಹದ ನೆನಪು ಇಸ್ರಯೇಲರಲ್ಲಿ ಹುಟ್ಟುವುದು; ನಾನೇ ಸರ್ವೇಶ್ವರ ಎಂದು ಅವರಿಗೆ ಮನದಟ್ಟಾಗುವುದು.”


ನಿಮ್ಮ ಮಾರ್ಗವನ್ನು ಕೈಬಿಟ್ಟು ಎಷ್ಟು ಸುಲಭವಾಗಿ ಅತ್ತಿತ್ತ ಓಡಾಡುತ್ತೀರಿ! ಅಸ್ಸೀರಿಯದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿರೋ ಹಾಗೆಯೇ ಈಜಿಪ್ಟಿನ ವಿಷಯವಾಗಿಯೂ ಆಶಾಭಂಗಪಡುವಿರಿ.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ನೈದ್ ನದಿಯ ನೀರನ್ನು ಕುಡಿಯಲು ಈಜಿಪ್ಟಿನ ದಾರಿಯನ್ನು ಹಿಡಿದದ್ದರಿಂದ ನಿನಗೆ ಬಂದ ಲಾಭವಾದರೂ ಏನು? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡಲು ಅಸ್ಸೀರಿಯ ಮಾರ್ಗದಲ್ಲಿ ಹೆಜ್ಜೆಯಿಟ್ಟಿದ್ದರಿಂದ ನಿನಗೆ ಬಂದ ಲಾಭವಾದರೂ ಏನು?


ಅಲ್ಲಿಂದಲೂ ನಿರಾಶೆಯಿಂದ ತಲೆಯ ಮೇಲೆ ಕೈಹೊತ್ತು ಹೊರಡುವಿರಿ. ನೀವು ಯಾರಲ್ಲಿ ನಂಬಿಕೆಯಿಟ್ಟಿದ್ದಿರೋ ಅವರನ್ನು ಸರ್ವೇಶ್ವರನಾದ ನಾನು ನಿರಾಕರಿಸಿದ್ದೇನೆ. ಅವರಿಂದ ನಿಮ್ಮ ಕಾರ್ಯ ಕೈಗೂಡದು.”


ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು.


ಅಷ್ಟರಲ್ಲಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತ್ತು. ಈ ಸಂಗತಿಯನ್ನು ಕೇಳಿ, ಜೆರುಸಲೇಮನ್ನು ಈಗಾಗಲೆ ಮುತ್ತಿದ್ದ ಬಾಬಿಲೋನಿಯದ ಸೈನಿಕರು ಅದನ್ನು ಬಿಟ್ಟುಹೋಗಿದ್ದರು.


ಈ ಸಂದರ್ಭದಲ್ಲಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿ ಬಂದ ವಾಣಿ:


ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈಜಿಪ್ಟಿನ ಅರಸ ಫರೋಹನಿಗೆ ವಿರುದ್ಧನಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿ ಇರುವುದನ್ನೂ, ಮುರಿದದ್ದನ್ನೂ ಪೂರ್ತಿಯಾಗಿ ಮುರಿದುಬಿಟ್ಟು, ಖಡ್ಗವು ಅವನ ಕೈಯೊಳಗಿನಿಂದ ಬೀಳುವಂತೆ ಮಾಡುವೆನು.


ಬಾಬಿಲೋನಿನ ಅರಸನು ಈಜಿಪ್ಟಿನ ಪ್ರವಾಹಕ್ಕೂ ಯೂಫ್ರಟಿಸ್ ನದಿಗೂ ಮಧ್ಯದಲ್ಲಿದ್ದ ಈಜಿಪ್ಟ್ ರಾಜನ ಎಲ್ಲಾ ದೇಶವನ್ನು ಸ್ವಾಧೀನ ಮಾಡಿಕೊಂಡನು. ಅಂದಿನಿಂದ ಈಜಿಪ್ಟಿನ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.


ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟ್ ಎಂಬ ಊರುಗೋಲಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಆದರೆ ಅದು ಊರಿಕೊಳ್ಳುವವನ ಕೈಯನ್ನು ಚುಚ್ಚಿ ತಿವಿಯುವ ಕೋಲು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು