Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:9 - ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಇಂತೆನ್ನುತ್ತಾರೆ:- ಬಾಬಿಲೋನಿಯರು ನಿಮ್ಮಿಂದ ಖಂಡಿತವಾಗಿ ತೊಲಗಿಹೋಗುವರು ಎಂದುಕೊಂಡು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ಅವರು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಇಂತೆನ್ನುತ್ತಾನೆ, “ಕಸ್ದೀಯರು ನಮ್ಮಿಂದ ತೊಲಗಿ ಹೋಗುವುದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಇಂತೆನ್ನುತ್ತಾನೆ - ಕಸ್ದೀಯರು ನಮ್ಮಿಂದ ತೊಲಗಿ ಹೋಗುವದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮ್ ನಿವಾಸಿಗಳೇ “ಬಾಬಿಲೋನ್ ಸೈನಿಕರು ಖಂಡಿತವಾಗಿಯೂ ನಮ್ಮನ್ನು ಬಿಟ್ಟುಹೋಗುವರು” ಎಂದು ನಿಮಗೆ ನೀವೇ ಹೇಳಿಕೊಂಡು ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳಬೇಡಿ, ಅವರು ನಿಮ್ಮನ್ನು ಬಿಟ್ಟುಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಕಸ್ದೀಯರು ನಿಜವಾಗಿ ನಮ್ಮನ್ನು ಬಿಟ್ಟು ಹೋಗುವರು,’ ಎಂದುಕೊಂಡು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ; ಏಕೆಂದರೆ ಅವರು ತೊಲಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:9
9 ತಿಳಿವುಗಳ ಹೋಲಿಕೆ  

ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.


ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು.


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


ಮೋಸಹೋಗದಿರಿ, ದೇವರನ್ನು ವಂಚಿಸಬಹುದೆಂದು ಭಾವಿಸದಿರಿ; ಬಿತ್ತುವುದನ್ನೇ ಕೊಯ್ಯುತ್ತೇವೆ ಎಂಬುದನ್ನು ನೆನಪಿನಲ್ಲಿಡಿ.


ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.


ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ.


ವ್ಯರ್ಥವಾದುದನು ನಂಬಿ ಅವನು ಮೋಸಹೋಗದಿರಲಿ ಇಲ್ಲವಾದರೆ ಅವನಿಗೆ ಸಿಗುವ ಪ್ರತಿಫಲ ವ್ಯರ್ಥವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು