Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:10 - ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ಕೇಳಿದ ಅರಸನು ಸುಡಾನಿನ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿ ಆಳುಗಳನ್ನು ಕರೆದುಕೊಂಡು ಹೋಗಿ ಪ್ರವಾದಿ ಯೆರೆಮೀಯನು ಸಾಯುವ ಮೊದಲೇ, ಅವನನ್ನು ಬಾವಿಯಿಂದ ಎತ್ತಿಸು,” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ - ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯವದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿಸು ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ರಾಜನಾದ ಚಿದ್ಕೀಯನು ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ, “ಅರಮನೆಯಿಂದ ಮೂರು ಜನರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಯೆರೆಮೀಯನನ್ನು ಅವನು ಸಾಯುವ ಮುಂಚೆ ಬಾವಿಯಿಂದ ಮೇಲೆತ್ತು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಪ್ರವಾದಿಯಾದ ಯೆರೆಮೀಯನನ್ನು ಅವನು ಸಾಯುವುದಕ್ಕಿಂತ ಮುಂಚೆ ಬಾವಿಯೊಳಗಿಂದ ಮೇಲಕ್ಕೆತ್ತು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:10
7 ತಿಳಿವುಗಳ ಹೋಲಿಕೆ  

ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಕತ್ತರಿಸುವನು ಕೆಡುಕರ ಕೋರೆಕೋಡುಗಳನು I ಎತ್ತರಿಸುವನು ಸಜ್ಜನರ ಕೋರೆಕೊಂಬುಗಳನು II


ಆಗ ಅರಸನು, ರಾಣಿ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೇರಿಸಿ ಅವನ ಮನೆಯನ್ನು ಎಸ್ತೇರಳಿಗೆ ದಾನ ಮಾಡಿದೆನಲ್ಲವೆ?


ಪ್ರಾಕಾರದಲ್ಲಿ ನಿಂತಿದ್ದ ಎಸ್ತೇರ್‍ರಾಣಿಯನ್ನು ಅವನು ಕಂಡೊಡನೆ, ಆಕೆಯೆಡೆ ಮೆಚ್ಚುಗೆ ತೋರಿ ತನ್ನ ಕೈಯಲ್ಲಿದ್ದ ಸ್ವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.


ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಸುಡಾನಿನವನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದುಕೊಂಡನು.


“ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು.


ಕೂಡಲೇ ಸುಡಾನಿನ ಎಬೆದ್ಮೆಲೆಕನು ಆಳುಗಳನ್ನು ಕರೆದುಕೊಂಡು ಹೋಗಿ, ಅರಮನೆಯನ್ನು ಹೊಕ್ಕು, ಖಜಾನೆಯ ಕೆಳಗಣ ಕೋಣೆಯಿಂದ ಹಳೆಯ ಹರಕು ಚಿಂದಿಪಂದಿಗಳನ್ನು ತೆಗೆದುಕೊಂಡು, ಹಗ್ಗಕ್ಕೆ ಕಟ್ಟಿ ಬಾವಿಯೊಳಗಿದ್ದ ಯೆರೆಮೀಯನಿಗೆ ಮುಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು