Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:11 - ಕನ್ನಡ ಸತ್ಯವೇದವು C.L. Bible (BSI)

11 ಕೂಡಲೇ ಸುಡಾನಿನ ಎಬೆದ್ಮೆಲೆಕನು ಆಳುಗಳನ್ನು ಕರೆದುಕೊಂಡು ಹೋಗಿ, ಅರಮನೆಯನ್ನು ಹೊಕ್ಕು, ಖಜಾನೆಯ ಕೆಳಗಣ ಕೋಣೆಯಿಂದ ಹಳೆಯ ಹರಕು ಚಿಂದಿಪಂದಿಗಳನ್ನು ತೆಗೆದುಕೊಂಡು, ಹಗ್ಗಕ್ಕೆ ಕಟ್ಟಿ ಬಾವಿಯೊಳಗಿದ್ದ ಯೆರೆಮೀಯನಿಗೆ ಮುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡುಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಣ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಪಂದಿಗಳನ್ನು ತೆಗೆದುಕೊಂಡು ಬಾವಿಯೊಳಗೆ ಹಗ್ಗಗಳಿಂದ ಯೆರೆಮೀಯನಿಗೆ ಮುಟ್ಟಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಬೆದ್ಮೆಲೆಕನು ಆ ಜನರನ್ನು ಕರೆದುಕೊಂಡು ಹೊರಟನು. ಅವನು ಮೊದಲು ಅರಮನೆಯ ಉಗ್ರಾಣದ ಕೆಳಗಿರುವ ಕೋಣೆಗೆ ಹೋದನು. ಆ ಕೋಣೆಯಿಂದ ಅವನು ಕೆಲವು ಹಳೆಯದಾದ ಮತ್ತು ಹರಿದುಹೋದ ಬಟ್ಟೆಗಳನ್ನು ತೆಗೆದುಕೊಂಡನು. ಆ ಚಿಂದಿಬಟ್ಟೆಗಳನ್ನು ಒಂದು ಹಗ್ಗಕ್ಕೆ ಕಟ್ಟಿ ಆಳವಾದ ಬಾವಿಯಲ್ಲಿ ಯೆರೆಮೀಯನಿಗೆ ತಲುಪುವಂತೆ ಇಳಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರೆದುಕೊಂಡು, ಖಜಾನೆ ಕೆಳಗಿರುವ ಅರಮನೆಗೆ ಹೋಗಿ, ಅಲ್ಲಿಂದ ಹರಿದುಹೋದ ಹಳೆಯ ಬಟ್ಟೆಗಳನ್ನೂ, ಸವೆದು ಹೋದ ಹಳೆಯ ವಸ್ತ್ರಗಳನ್ನೂ ತೆಗೆದುಕೊಂಡು, ಅವುಗಳನ್ನು ಹಗ್ಗಗಳಂತೆ ಯೆರೆಮೀಯನ ಬಳಿಗೆ ಬಾವಿಯೊಳಗೆ ಇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:11
5 ತಿಳಿವುಗಳ ಹೋಲಿಕೆ  

ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಸುಡಾನಿನವನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದುಕೊಂಡನು.


ಇದನ್ನು ಕೇಳಿದ ಅರಸನು ಸುಡಾನಿನ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿ ಆಳುಗಳನ್ನು ಕರೆದುಕೊಂಡು ಹೋಗಿ ಪ್ರವಾದಿ ಯೆರೆಮೀಯನು ಸಾಯುವ ಮೊದಲೇ, ಅವನನ್ನು ಬಾವಿಯಿಂದ ಎತ್ತಿಸು,” ಎಂದು ಅಪ್ಪಣೆಕೊಟ್ಟನು.


“ಹಳೆಯ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.


ಎಲ್ಲ ಬೆಳ್ಳಿ ಬಂಗಾರ ಹಾಗೂ ತಾಮ್ರ ಕಬ್ಬಿಣ ಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಮೀಸಲಾಗಿದ್ದು ಅವರ ಭಂಡಾರಕ್ಕೆ ಸೇರತಕ್ಕವುಗಳು,” ಎಂದನು.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು