Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:16 - ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಅರಸ ಚಿದ್ಕೀಯನು, “ನಮಗೆ ಈ ಪ್ರಾಣವನ್ನು ದಯಪಾಲಿಸಿದ ಸರ್ವೇಶ್ವರನ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ. ನಿನ್ನ ಪ್ರಾಣವನ್ನು ಹುಡುಕುವ ಈ ಜನರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ,” ಎಂದು ಗುಟ್ಟಾಗಿ ಪ್ರಮಾಣಮಾಡಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸೆನು, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸೆನು ಎಂದು ರಹಸ್ಯವಾಗಿ ಪ್ರಮಾಣಮಾಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ರಾಜನಾದ ಚಿದ್ಕೀಯನು ಯೆರೆಮೀಯನಿಗೆ ರಹಸ್ಯವಾಗಿ, “ಯೆರೆಮೀಯನೇ, ನಮಗೆ ಉಸಿರನ್ನೂ ಜೀವವನ್ನೂ ದಯಪಾಲಿಸಿದ ಯೆಹೋವನ ಆಣೆಯಾಗಿ ಹೇಳುತ್ತೇನೆ, ನಾನು ನಿನ್ನನ್ನು ಕೊಲ್ಲುವುದಿಲ್ಲ. ಕೊಲ್ಲಬಯಸುವ ಅಧಿಕಾರಿಗಳ ಕೈಗೂ ನಿನ್ನನ್ನು ಕೊಡುವದಿಲ್ಲವೆಂದು ನಾನು ಮಾತು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗೆ ಅರಸನಾದ ಚಿದ್ಕೀಯನು ಯೆರೆಮೀಯನಿಗೆ ಅಂತರಂಗದಲ್ಲಿ ಪ್ರಮಾಣಮಾಡಿ, “ನಮಗೆ ಈ ಪ್ರಾಣವನ್ನು ಉಂಟುಮಾಡಿದ ಯೆಹೋವ ದೇವರ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:16
13 ತಿಳಿವುಗಳ ಹೋಲಿಕೆ  

ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?


ಇವರೆಲ್ಲರನ್ನು ಶತ್ರುಗಳ ವಶಕ್ಕೆ ಒಪ್ಪಿಸುವೆನು. ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು. ಇವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು.


“ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.


ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು