ಯೆರೆಮೀಯ 38:17 - ಕನ್ನಡ ಸತ್ಯವೇದವು C.L. Bible (BSI)17 ಆಗ ಯೆರೆಮೀಯನು, “ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲರ ದೇವರೂ ಆದ ಸ್ವಾಮಿ ಹೀಗೆನ್ನುತ್ತಾರೆ: ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳ ಮೊರೆಹೊಕ್ಕರೆ ತಮ್ಮ ಪ್ರಾಣ ಉಳಿಯುವುದು. ಈ ನಗರ ಬೆಂಕಿ ಇಂದ ಸುಟ್ಟುಹೋಗದು, ತಾವೂ ತಮ್ಮ ಮನೆಯವರೂ ಮನೆತನದವರೂ ಬದುಕುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆರೆಮೀಯನು ಚಿದ್ಕೀಯನಿಗೆ - ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಕ್ಕರೆ ನಿನ್ನ ಪ್ರಾಣವುಳಿಯುವದು, ಈ ಪಟ್ಟಣವೂ ಬೆಂಕಿಯಿಂದ ಸುಡದು, ನೀನೂ ನಿನ್ನ ಮನೆತನದವರೂ ಬದುಕುವಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ಯೆರೆಮೀಯನು ರಾಜನಾದ ಚಿದ್ಕೀಯನಿಗೆ ಹೀಗೆಂದನು: “ಇಸ್ರೇಲರ ದೇವರಾದ ಮತ್ತು ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಬಾಬಿಲೋನಿನ ರಾಜನ ಅಧಿಕಾರಿಗಳಿಗೆ ಶರಣಾಗತನಾದರೆ ನಿನ್ನ ಪ್ರಾಣವನ್ನು ಉಳಿಸಲಾಗುವುದು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲ್ಪಡುವುದಿಲ್ಲ. ನೀನೂ ಬದುಕುವೆ ಮತ್ತು ನಿನ್ನ ಕುಟುಂಬದವರೂ ಬದುಕುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಯೆರೆಮೀಯನು ಚಿದ್ಕೀಯನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿಶ್ಚಯವಾಗಿ ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ, ನಿನ್ನ ಪ್ರಾಣವು ಬದುಕುವುದು. ಈ ಪಟ್ಟಣವು ಬೆಂಕಿಯಿಂದ ಸುಡಲಾಗುವುದಿಲ್ಲ. ನೀನೂ, ನಿನ್ನ ಮನೆಯವರೂ ಬದುಕುವಿರಿ. ಅಧ್ಯಾಯವನ್ನು ನೋಡಿ |