Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:18 - ಕನ್ನಡ ಸತ್ಯವೇದವು C.L. Bible (BSI)

18 ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳಿಗೆ ಮೊರೆಹೋಗದಿದ್ದರೆ ಈ ನಗರವು ಬಾಬಿಲೋನಿನವರ ಕೈವಶವಾಗುವುದು. ಅವರು ಇದನ್ನು ಬೆಂಕಿ ಇಂದ ಸುಟ್ಟುಬಿಡುವರು. ತಾವು ಅವರ ಕೈಯಿಂದ ತಪ್ಪಿಸಿಕೊಳ್ಳಲಾರಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವದು. ಅವರು ಅದನ್ನು ಬೆಂಕಿಯಿಂದ ಸುಟ್ಟುಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ನೀನು ಬಾಬಿಲೋನಿನ ಅಧಿಕಾರಿಗಳಿಗೆ ಶರಣಾಗತನಾಗಲು ಒಪ್ಪದ್ದಿದ್ದರೆ, ಜೆರುಸಲೇಮನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ಅವರು ಜೆರುಸಲೇಮನ್ನು ಸುಟ್ಟುಬಿಡುವರು ಮತ್ತು ನೀನು ಸಹ ಅವರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ನೀನು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ, ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲಾಗುವುದು. ಅವರು ಅದನ್ನು ಬೆಂಕಿಯಿಂದ ಸುಡುವರು. ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವುದಿಲ್ಲ,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:18
20 ತಿಳಿವುಗಳ ಹೋಲಿಕೆ  

ಮತ್ತಾನನ ಮಗ ಶೆಫತ್ಯ, ಪಷ್ಹೂರನ ಮಗ ಗೆದಲ್ಯ, ಸೆಲೆಮ್ಯನ ಮಗ ಯೂಕಲ, ಹಾಗೂ ಮಲ್ಕೀಯನ ಮಗ ಪಷ್ಹೂರ ಇವರು ಮೇಲೆ ಹೇಳಿದ ಮಾತುಗಳನ್ನು ಕೇಳಿದರು.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ನೇರ್ಗಲ್‍ಸರೆಚರ್, ಸಮ್ಗರ್‍ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲ ಪದಾಧಿಕಾರಿಗಳು ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಕುಳಿತುಕೊಂಡರು


ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು.


ಬಾಬಿಲೋನಿಯದವರು ಪುನಃ ಬಂದು ಈ ನಗರದ ಮೇಲೆ ದಾಳಿ ನಡೆಸುವರು. ಇದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಹಾಕುವರು.’


ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’


“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.


ಆದರೆ ಅವನು ಬಾಬಿಲೋನಿನ ಅರಸನ ವಿರುದ್ಧ ದಂಗೆಯೆದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಈಜಿಪ್ಟಿಗೆ ರಾಯಭಾರಿಗಳನ್ನು ಕಳುಹಿಸಿದ. ಆದರೂ ಇವನು ಗೆಲ್ಲುವನೇ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೇ? ಒಪ್ಪಂದವನ್ನು ಮೀರಿದವನು ತಪ್ಪಿಸಿಕೊಂಡಾನೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು