Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:19 - ಕನ್ನಡ ಸತ್ಯವೇದವು C.L. Bible (BSI)

19 ಇದನ್ನು ಕೇಳಿದ ಅರಸ ಚಿದ್ಕೀಯನು ಯೆರೆಮೀಯನಿಗೆ, “ಬಾಬಿಲೋನಿಯದವರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸಬಹುದು. ಅವರು ನನ್ನನ್ನು ಹಿಂಸಿಸಬಹುದು ಎಂಬ ಸಂಶಯ ನನಗಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಕಸ್ದೀಯರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಿಯಾರು ಎಂದು ಶಂಕೆಪಡುತ್ತೇನೆ ಎಂದುತ್ತರಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಚಿದ್ಕೀಯನು, “ನಾನು ಈಗಾಗಲೇ ಬಾಬಿಲೋನಿನ ಸೈನ್ಯದ ಕಡೆಗೆ ಸೇರಿದ ಯೆಹೂದ್ಯರಿಗೆ ಹೆದರುತ್ತೇನೆ. ಆ ಸೈನಿಕರು ನನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸಿಕೊಡಬಹುದು ಮತ್ತು ಅವರು ನನಗೆ ಕೇಡುಮಾಡಬಹುದು; ನನ್ನನ್ನು ಹಿಂಸಿಸಬಹುದು ಎಂದು ಭಯವಾಗುತ್ತದೆ” ಎಂದು ಯೆರೆಮೀಯನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:19
17 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲಿ ಹಲವುಮಂದಿ ಮುಖಂಡರಿಗೆ ಯೇಸುವಿನಲ್ಲಿ ವಿಶ್ವಾಸಮೂಡಿತು. ಆದರೆ ಫರಿಸಾಯರು ಪ್ರಾರ್ಥನಾಮಂದಿರಗಳಿಂದ ತಮಗೆ ಬಹಿಷ್ಕಾರ ಹಾಕಿಯಾರೆಂಬ ಅಂಜಿಕೆಯ ಕಾರಣ ಅವರು ತಮ್ಮ ವಿಶ್ವಾಸವನ್ನು ಬಯಲುಮಾಡಲಿಲ್ಲ.


ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ರಕ್ಷಾದಳದ ನಾಯಕನಾದ ನೆಬೂಜರದಾನನು ನಗರದಲ್ಲಿ ಉಳಿದಿದ್ದವರನ್ನು ಹಾಗು ಮೊದಲೇ ತನ್ನನ್ನು ಮರೆಹೊಕ್ಕಿದವರನ್ನು ಮತ್ತಿತರ ಕೆಲಸಗಾರರನ್ನೆಲ್ಲಾ ಬಾಬಿಲೋನಿಗೆ ಸೆರೆ ಒಯ್ದನು.


ಆದುದರಿಂದ ಸೌಲನು ಭಯಭೀತನಾಗಿ ತನ್ನ ಆಯುಧವಾಹಕನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಬಹುದು,” ಎಂದು ಹೇಳಿದನು. ವಾಹಕನು ಹೆದರಿ, “ಒಲ್ಲೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ಸೌಲನು ಸಮುವೇಲನಿಗೆ, “ನಾನು ಸರ್ವೇಶ್ವರನ ಮತ್ತು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆ.


ಅವರು ಆನಂದಲಹರಿಯಲ್ಲಿದ್ದಾಗ, “ನಮ್ಮ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿ,” ಎಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ಅವರೆಲ್ಲರ ಮನರಂಜಿಸಬೇಕಾಯಿತು.


ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು,” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.


ಅದಕ್ಕೆ ಅರಸ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ. ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ,” ಎಂದನು.


ಬಾಗಿಲನ್ನೂ ದಾಟದೆ ಒಳಗೇ ನಾನು ಮೌನವಿದ್ದಿದ್ದರೆ ಜನಸಾಮಾನ್ಯರಂತೆ ಪಾಪವನು ಮನದಲೆ ಬಚ್ಚಿಟ್ಟಿದ್ದರೆ,


ದೂತರು ಎಫ್ರಯಿಮ್, ಮನಸ್ಸೆ, ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಆದರೆ ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.


ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿ ಸನ್ಬಲ್ಲಟನಿಗೆ ಮುಟ್ಟಿತು. ಅವನು ಬಹಳ ಹೊಟ್ಟೆಕಿಚ್ಚಿನ ಹಾಗು ಸಿಡುಕಿನ ವ್ಯಕ್ತಿ.


ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು