Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:2 - ಕನ್ನಡ ಸತ್ಯವೇದವು C.L. Bible (BSI)

2 ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ” ಎಂದು ಸಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರವಿುಸುವನು; ಅದು ಅವನ ಸೈನ್ಯದ ವಶವಾಗುವದು ಖಂಡಿತ ಎಂದು ಸಾರುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರು ಖಡ್ಗದಿಂದಾಗಲಿ ಕ್ಷಾಮದಿಂದಾಗಲಿ ಭಯಂಕರವಾದ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಆದರೆ ಬಾಬಿಲೋನಿನ ಸೈನಿಕರಿಗೆ ಶರಣಾಗುವ ಪ್ರತಿಯೊಬ್ಬರು ಬದುಕುವರು. ಅವರು ಜೀವಂತ ಉಳಿಯುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರು ಹೀಗೆನ್ನುತ್ತಾರೆ: ‘ನಗರದಲ್ಲಿ ನಿಲ್ಲುವವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವರು. ನಗರವನ್ನು ಬಿಟ್ಟು ಹೋಗಿ, ಬಾಬಿಲೋನಿಯರನ್ನು ಮೊರೆಹೋಗುವವರು ಬದುಕುವರು. ತಮ್ಮ ಪ್ರಾಣದೊಂದಿಗೆ ತಪ್ಪಿಸಿಕೊಂಡವರು, ಬದುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:2
20 ತಿಳಿವುಗಳ ಹೋಲಿಕೆ  

ನೀನು ನನ್ನಲ್ಲಿ ಭರವಸೆಯಿಟ್ಟ ಕಾರಣ ನಿನ್ನನ್ನು ರಕ್ಷಿಸಿಯೇ ರಕ್ಷಿಸುವೆನು. ನೀನು ಕತ್ತಿಗೆ ತುತ್ತಾಗಲಾರೆ. ಅದರ ಬಾಯಿಂದ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಇದು ಸರ್ವೇಶ್ವರನಾದ ನನ್ನ ವಾಣಿ.”


ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ಈಜಿಪ್ಟಿಗೆ ಹೋಗಿ ಅಲ್ಲೆ ವಾಸಿಸಲು ಹಟಹಿಡಿಯುವ ಎಲ್ಲ ಜನರಿಗೂ ಇದೇ ಗತಿಯಾಗುವುದು. ಖಡ್ಗ-ಕ್ಷಾಮ-ವ್ಯಾಧಿಯಿಂದ ಅವರು ಸಾಯುವರು. ನಾನು ಬರಮಾಡುವ ವಿಪತ್ತಿನಿಂದ ಅವರಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು’.”


“ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.


ಸರ್ವೇಶ್ವರನಾದ ದೇವರು ನುಡಿದದ್ದು : “ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, ‘ಅಕಟಾ, ಇಸ್ರಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ಜೆರುಸಲೇಮಿನವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸಿದಂತೆ ಈಜಿಪ್ಟಿನಲ್ಲಿ ವಾಸಿಸುವವರನ್ನೂ ದಂಡಿಸುವೆನು.


ನೀವು ಯಾವ ನಾಡಿನಲ್ಲಿ ವಾಸಮಾಡಲು ಬಯಸಿ ಹೋಗುತ್ತೀರೋ ಆ ನಾಡಿನಲ್ಲಿ ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವಿರಿ. ಇದು ನಿಶ್ಚಯ ಎಂದು ತಿಳಿಯಿರಿ,” ಎಂದನು.


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗಕ್ಷಾಮವ್ಯಾಧಿಗಳಿಂದ ಸಾಯಬೇಕಾಗುವುದೆಂದು ಸರ್ವೇಶ್ವರನೇ ನುಡಿದಿದ್ದಾರೆ. ಅಂಥ ಗತಿ ನಿಮಗೂ ನಿಮ್ಮ ಪ್ರಜೆಗೂ ಏಕೆ ಬರಬೇಕು?


“ಇದಲ್ಲದೆ ಸರ್ವೇಶ್ವರನಾದ ನಾನು ಹೇಳುವುದು ಇದು: ಜುದೇಯದ ಅರಸ ಚಿದ್ಕೀಯನು, ಅವನ ಪ್ರಧಾನಿಗಳು, ಜೆರುಸಲೇಮಿನ ಜನರು ಶೇಷವಾಗಿ ಈ ನಾಡಿನಲ್ಲೆ ಉಳಿದವರು ಮತ್ತು ಈಜಿಪ್ಟ್ ದೇಶಕ್ಕೆ ವಲಸೆಹೋದವರು - ಇವರೆಲ್ಲರು ಕೆಟ್ಟು ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಅಂಥ ಗತಿಗೆ ಇಳಿಸುವೆನು.


ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.


ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೆ ನೆಲೆಗೊಳಿಸುವೆನು; ಅವರು ಅಲ್ಲೆ ಉತ್ತು, ಬಿತ್ತು ವಾಸಮಾಡುವರು. ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ, ದಾವೀದನ ಸಿಂಹಾಸನವನ್ನು ಅಲಂಕರಿಸಿದ್ದ ಅರಸನ ವಿಷಯವಾಗಿ ಹಾಗೂ ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸೋದರರೂ ಈ ನಗರದ ನಿವಾಸಿಗಳೂ ಆದವರ ವಿಷಯವಾಗಿ ಹೇಳಿರುವುದನ್ನು ಕೇಳಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು