Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:21 - ಕನ್ನಡ ಸತ್ಯವೇದವು C.L. Bible (BSI)

21 ತಾವು ಶತ್ರುವನ್ನು ಮರೆಹೋಗೆನು ಎನ್ನುವುದಾದರೆ ಸರ್ವೇಶ್ವರ ತಮ್ಮ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನೀನು, ‘ಶತ್ರುವಿನ ಮೊರೆಹೋಗೆನು’ ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ನೀನು - ಶತ್ರುವನ್ನು ಮರೆಹೊಗೆನು ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಬಾಬಿಲೋನಿನ ಸೈನಿಕರಿಗೆ ಶರಣಾಗತನಾಗದಿದ್ದರೆ ಏನಾಗುವದೆಂಬುದನ್ನು ಯೆಹೋವನು ನನಗೆ ತೋರಿಸಿಕೊಟ್ಟಿದ್ದಾನೆ. ಯೆಹೋವನು ನನಗೆ ಹೀಗೆ ಹೇಳಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ನೀನು ಶರಣಾಗತಿಯನ್ನು ನಿರಾಕರಿಸಿದರೆ, ಯೆಹೋವ ದೇವರು ನನಗೆ ತೋರಿಸಿದ ಮಾತು ಇದೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:21
20 ತಿಳಿವುಗಳ ಹೋಲಿಕೆ  

ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ದೇವರು ಅಂಥವರನ್ನು ದಂಡಿಸಬೇಕೆನ್ನುತ್ತೀಯೋ? ಆತನ ತೀರ್ಪನ್ನು ನೀನೇ ಅಲ್ಲಗಳೆದಿರುವೆಯಲ್ಲವೆ? ಈಗ ನಾನು ಹೇಳಲಾರೆ, ನೀನೇ ಹೇಳು, ನಿನ್ನ ಅಭಿಪ್ರಾಯವನು ನಮಗೆ ತಿಳಿಸು.


ಆತನದು ಏಕಚಿತ್ತ; ಅದನು ಬದಲಾಯಿಸಲಸಾಧ್ಯ ಆತ ಬಯಸಿದ್ದೆ ಸಿದ್ಧಿಯಾದಕಾರ್ಯ.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮಾಡುವೆನೆಂದು ನೀನು ನನ್ನ ಬಳಿಗೆ ಕಳಿಸಿದ ದೂತರಿಗೆ ನಾನು ಹೇಳಲಿಲ್ಲವೆ?


ಆಗ ಸರ್ವೇಶ್ವರ, “ಎಲ್ಲಿಯವರೆಗೆ ನೀವು ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?


ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.


ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.


ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು; ಸರ್ವೇಶ್ವರನ ನುಡಿಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು