ಯೆರೆಮೀಯ 38:27 - ಕನ್ನಡ ಸತ್ಯವೇದವು C.L. Bible (BSI)27 ಕೆಲವು ದಿನಗಳಾದ ಮೇಲೆ ಎಲ್ಲ ಪದಾಧಿಕಾರಿಗಳು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಟ್ಟನು. ಅಷ್ಟಕ್ಕೆ ಮಾತು ಮುಗಿದು ಅವನಿಂದ ಏನೂ ತಿಳಿದುಕೊಳ್ಳಲಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ರಾಜ್ಯಾಧಿಕಾರಿಗಳು ಅವನನ್ನು ಪ್ರಶ್ನಿಸುವದಕ್ಕಾಗಿ ಯೆರೆಮೀಯನಲ್ಲಿಗೆ ಬಂದರು. ರಾಜನು ಆಜ್ಞಾಪಿಸಿದಂತೆ ಯೆರೆಮೀಯನು ಅವರಿಗೆ ಎಲ್ಲವನ್ನು ಹೇಳಿದನು. ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಬಿಟ್ಟುಹೋದರು. ಯೆರೆಮೀಯನ ಮತ್ತು ರಾಜನ ಸಂಭಾಷಣೆಯನ್ನು ಯಾರೂ ಕೇಳಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಪ್ರಧಾನರೆಲ್ಲರೂ ಯೆರೆಮೀಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು. ಆಗ ಅವರು ಸುಮ್ಮನಾದರು. ಏಕೆಂದರೆ ಆ ಕಾರ್ಯದ ವಿಷಯವನ್ನು ಅವರು ಗ್ರಹಿಸಲಿಲ್ಲ. ಅಧ್ಯಾಯವನ್ನು ನೋಡಿ |