ಯೆರೆಮೀಯ 38:4 - ಕನ್ನಡ ಸತ್ಯವೇದವು C.L. Bible (BSI)4 ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |