Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:13 - ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ ನೆಬೂಜರದಾನನು ಹಾಗು ಕಂಚುಕಿಯರ ಮುಖ್ಯಸ್ಥ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್ ಮತ್ತು ಬಾಬಿಲೋನಿಯರ ಅರಸನ ಎಲ್ಲ ಪದಾಧಿಕಾರಿಗಳು ಸೇರಿ ಯೆರೆಮೀಯನನ್ನು ಕಾರಾಗೃಹದಿಂದ ಕರೆತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್‍ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನ್, ಬಾಬಿಲೋನಿನ ಸೈನ್ಯದ ಒಬ್ಬ ಮುಖ್ಯ ಅಧಿಕಾರಿಯಾದ ನೆಬೂಷಜ್ಜಾನ್, ದೊಡ್ಡ ಅಧಿಕಾರಿಯಾದ ನೇರ್ಗಲ್ ಸರೆಚರ್ ಮತ್ತು ಬಾಬಿಲೋನಿನ ಇನ್ನುಳಿದ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಹುಡುಕಲು ಜನರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನನ್ನೂ, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:13
5 ತಿಳಿವುಗಳ ಹೋಲಿಕೆ  

ನೇರ್ಗಲ್‍ಸರೆಚರ್, ಸಮ್ಗರ್‍ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲ ಪದಾಧಿಕಾರಿಗಳು ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಕುಳಿತುಕೊಂಡರು


ರಕ್ಷಾದಳದ ನಾಯಕನಾದ ನೆಬೂಜರದಾನನು ನಗರದಲ್ಲಿ ಉಳಿದಿದ್ದವರನ್ನು ಹಾಗು ಮೊದಲೇ ತನ್ನನ್ನು ಮರೆಹೊಕ್ಕಿದವರನ್ನು ಮತ್ತಿತರ ಕೆಲಸಗಾರರನ್ನೆಲ್ಲಾ ಬಾಬಿಲೋನಿಗೆ ಸೆರೆ ಒಯ್ದನು.


ಜೆರುಸಲೇಮ್ ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


“ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.


ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಅವನನ್ನು ಒಪ್ಪಿಸಿ ಮನೆಗೆ ಕರೆದುಕೊಂಡುಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ವಾಡಿಕೆಯ ಪ್ರಕಾರ ಜನರ ನಡುವೆ ವಾಸಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು