Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:14 - ಕನ್ನಡ ಸತ್ಯವೇದವು C.L. Bible (BSI)

14 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಅವನನ್ನು ಒಪ್ಪಿಸಿ ಮನೆಗೆ ಕರೆದುಕೊಂಡುಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ವಾಡಿಕೆಯ ಪ್ರಕಾರ ಜನರ ನಡುವೆ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರತರಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು [ಎಂದಿನಂತೆ] ಜನರ ಮಧ್ಯೆ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಕಳುಹಿಸಿ ಯೆರೆಮೀಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ, ಶಾಫಾನನ ಮೊಮ್ಮಗನೂ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮನೆಗೆ ಕರೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:14
18 ತಿಳಿವುಗಳ ಹೋಲಿಕೆ  

ಜೆರುಸಲೇಮ್ ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡು, ಯಾಜಕ ಹಿಲ್ಕೀಯನು ಶಾಫಾನನ ಮಗ ಅಹೀಕಾಮ್, ಮೀಕಾಯನ ಮಗ ಅಕ್ಬೋರ್, ಲೇಖಕ ಶಾಫಾನ್ ಹಾಗು ತನ್ನ ಹಸ್ತಕನಾದ ಅಸಾಯ ಎಂಬುವರಿಗೆ,


ಸರ್ವೇಶ್ವರನ ವಾಣಿ ಮತ್ತೊಮ್ಮೆ ಯೆರೆಮೀಯನಿಗೆ ಕೇಳಿಸಿತು. ಇಷ್ಟರೊಳಗೆ ರಕ್ಷಾದಳದ ನಾಯಕ ನೆಬೂಜರದಾನನು ಜೆರುಸಲೇಮಿನವರ ಮತ್ತು ಜುದೇಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಯೆರೆಮೀಯನು ಕೂಡ ಸಂಕೋಲೆಗಳಿಂದ ಬಂಧಿತನಾಗಿರುವುದನ್ನು ಕಂಡು ಅವನನ್ನು ರಾಮದ ಬಳಿ ಬಿಡುಗಡೆ ಮಾಡಿದನು.


ಯೆರೆಮೀಯನು ಇನ್ನೂ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಸರ್ವೇಶ್ವರನ ಈ ವಾಣಿ ಕೇಳಿಸಿತು:


ಈ ಪ್ರಕಾರ ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು. ಬಳಿಕ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಕ್ರಮೇಣ ಕೈಗೂಡಿತು ಜೋಸೆಫನು ನುಡಿದದ್ದು I ಪ್ರಭುವಿನ ವಾಣಿ ಕಂಡುಬಂದಿತು ಸತ್ಯವೆಂದು II


ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.


“ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡನು. ಹಿಲ್ಕೀಯ, ಶಾಫಾನನ ಮಗ ಅಹೀಕಾಮ್, ಮೀಕನ ಮಗ ಅಬ್ದೋನ್, ಲೇಖಕ ಶಾಫಾನ್, ಸಹಕಾರಿಯಾದ ಅಸಾಯ ಎಂಬುವರಿಗೆ,


ಆ ಸಮಯದಲ್ಲಿ ಬಾಬಿಲೋನಿಯದ ಅರಸನ ಸೈನ್ಯ ಜೆರುಸಲೇಮನ್ನು ಮುತ್ತಿತ್ತು. ಪ್ರವಾದಿ ಯೆರೆಮೀಯನು ಜುದೇಯದ ರಾಜನ ಮನೆಗೆ ಸೇರಿದ ಕಾರಾಗೃಹದಲ್ಲಿ ಸೆರೆಯಾಗಿದ್ದನು.


ಅಂತೆಯೇ ನೆಬೂಜರದಾನನು ಹಾಗು ಕಂಚುಕಿಯರ ಮುಖ್ಯಸ್ಥ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್ ಮತ್ತು ಬಾಬಿಲೋನಿಯರ ಅರಸನ ಎಲ್ಲ ಪದಾಧಿಕಾರಿಗಳು ಸೇರಿ ಯೆರೆಮೀಯನನ್ನು ಕಾರಾಗೃಹದಿಂದ ಕರೆತರಿಸಿದರು.


ಯೆರೆಮೀಯನು ಉತ್ತರಕೊಡದೆ ಇರಲು ನೆಬೂಜರದಾನನು ಅವನಿಗೆ, “ಬಾಬಿಲೋನಿಯದ ಅರಸನು, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಜುದೇಯದ ನಗರಗಳಿಗೆ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆ. ಅವನ ಬಳಿಗೆ ಹೋಗು, ಅವನ ಹತ್ತಿರ ಜನರ ನಡುವೆ ವಾಸಮಾಡುವ ಇಲ್ಲವೆ ಎಲ್ಲಿಗೆ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳಿಸಿಬಿಟ್ಟನು.


ಆಗ ಯೆರೆಮೀಯನು ಅಹೀಕಾಮನ ಮಗ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ಅವನೊಡನೆ ಹಾಗು ನಾಡಿನ ಉಳಿದ ಜನರ ನಡುವೆ ವಾಸಮಾಡಿದನು.


ಏಳನೆಯ ತಿಂಗಳಿನಲ್ಲಿ ಇಷ್ಮಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು. ಈತನು ರಾಜವಂಶದವನು, ಎಲೀಷಾಮನ ಮೊಮ್ಮಗನು, ನೆತನ್ಯನ ಮಗನು ಹಾಗು ಅರಸನ ಪದಾಧಿಕಾರಿಗಳಲ್ಲಿ ಒಬ್ಬನು. ಅಲ್ಲಿ ಗೆದಲ್ಯನೊಂದಿಗೆ ಅವರೆಲ್ಲರು ಊಟಮಾಡುತ್ತಿದ್ದಾಗ,


ಆಗ ಅರಸ ಯೆಹೋಯಾಕೀಮನು ಅಕ್ಬೋರನ ಮಗ ಎಲ್ನಾಥಾನನನ್ನೂ ಕೆಲವು ಸಂಗಡಿಗರನ್ನೂ ಅಲ್ಲಿಗೆ ಕಳಿಸಿದ.


ಬಾಬಿಲೋನಿಯದ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿ ಹಾಗು ಬಾಬಿಲೋನಿಗೆ ಸೆರೆಹೋಗದ ನಾಡಿಗರಲ್ಲಿ ಬಡವರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿ ಹರಡಿತು. ಕಾಡುಮೇಡುಗಳಲ್ಲಿದ್ದ ಎಲ್ಲ ಯಹೂದ್ಯ ಸೈನಿಕರೂ ಸೇನಾಪತಿಗಳೂ ಇದನ್ನು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು