Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:18 - ಕನ್ನಡ ಸತ್ಯವೇದವು C.L. Bible (BSI)

18 ನೀನು ನನ್ನಲ್ಲಿ ಭರವಸೆಯಿಟ್ಟ ಕಾರಣ ನಿನ್ನನ್ನು ರಕ್ಷಿಸಿಯೇ ರಕ್ಷಿಸುವೆನು. ನೀನು ಕತ್ತಿಗೆ ತುತ್ತಾಗಲಾರೆ. ಅದರ ಬಾಯಿಂದ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಇದು ಸರ್ವೇಶ್ವರನಾದ ನನ್ನ ವಾಣಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳಕೊಂಡು ಹೋಗುವಿ; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುವೆನು. ನೀನು ಖಡ್ಗಕ್ಕೆ ಆಹುತಿಯಾಗುವದಿಲ್ಲ. ನೀನು ತಪ್ಪಿಸಿಕೊಂಡು ಬದುಕುವೆ. ನೀನು ನನ್ನಲ್ಲಿ ನಂಬಿಕೆ ಇಟ್ಟುಕೊಂಡಿದ್ದೇ ಇದಕ್ಕೆ ಕಾರಣ’” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು. ನೀನು ಖಡ್ಗದಿಂದ ಬೀಳುವುದಿಲ್ಲ. ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ, ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವುದೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:18
19 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ” ಎಂದು ಸಾರುತ್ತಿದ್ದನು.


ತನ್ನ ದಾಸರನು ಉದ್ಧಾರಮಾಡದಿರನು ಪ್ರಭು I ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು II


ನಗರದಲ್ಲೆ ನಿಲ್ಲುವವನು ಖಡ್ಗ - ಕ್ಷಾಮ - ವ್ಯಾಧಿಗಳಿಂದ ಸಾಯುವನು. ನಿಮಗೆ ಮುತ್ತಿಗೆ ಹಾಕುತ್ತಿರುವ ಬಾಬಿಲೋನಿಯಾದವರಿಗೆ ಮರೆಹೋಗಲು ನಗರವನ್ನು ಬಿಡುವವನು ಬದುಕುವನು. ತನ್ನ ಪ್ರಾಣವನ್ನಾದರು ಬಾಚಿಕೊಂಡು ಹೋಗುವನು.


ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.


ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I


ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಮೋಶೆಯ ಧರ್ಮಶಾಸ್ತ್ರದ ಅರಿವಿಲ್ಲದೆ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಒಳಗಾಗದೆಯೋ ನಾಶವಾಗುತ್ತಾರೆ. ಆ ಧರ್ಮಶಾಸ್ತ್ರದ ಅರಿವಿದ್ದೂ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಗುರಿಯಾಗುತ್ತಾರೆ.


ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಬರಗಾಲದಲ್ಲಿ ಮರಣದಿಂದ ಕಾಪಾಡುವನು ಯುದ್ಧಕಾಲದಲ್ಲಿ ಕತ್ತಿಯಿಂದ ರಕ್ಷಿಸುವನು.


ಬೀಳಬಹುದು ಸಾವಿರ ಹೆಣಗಳು ಪಕ್ಕದಲೆ I ಹತ್ತುಸಾವಿರ ಹೆಣಗಳು ನಿನ್ನ ಬಲಗಡೆಯಲೆ I ಅಂಥ ಕೇಡೊಂದೂ ಬಾರದು ನಿನ್ನ ಪಾಲಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು