Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:5 - ಕನ್ನಡ ಸತ್ಯವೇದವು C.L. Bible (BSI)

5 ಬಾಬಿಲೋನಿಯದ ಸೈನಿಕರು ಅವರನ್ನು ಹಿಂದಟ್ಟುತ್ತಾ ಜೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ಹಿಡಿದರು. ಹಮಾತ್ ನಾಡಿನ ರಿಬ್ಲದಲ್ಲಿದ್ದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ತಗಲಿ ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು; ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:5
26 ತಿಳಿವುಗಳ ಹೋಲಿಕೆ  

ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ಇಸ್ರಯೇಲರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಜೆರಿಕೋವಿನ ಬಯಲಿನಲ್ಲಿ ಪಾಸ್ಕಹಬ್ಬವನ್ನಾಚರಿಸಿದರು.


ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು.


ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳಿಗೆ ಮೊರೆಹೋಗದಿದ್ದರೆ ಈ ನಗರವು ಬಾಬಿಲೋನಿನವರ ಕೈವಶವಾಗುವುದು. ಅವರು ಇದನ್ನು ಬೆಂಕಿ ಇಂದ ಸುಟ್ಟುಬಿಡುವರು. ತಾವು ಅವರ ಕೈಯಿಂದ ತಪ್ಪಿಸಿಕೊಳ್ಳಲಾರಿರಿ,” ಎಂದು ಹೇಳಿದನು.


ಸುಮಾರು ನಾಲ್ವತ್ತು ಸಾವಿರ ಯೋಧರಿಂದ ಕೂಡಿದ ಅವರು ಸರ್ವೇಶ್ವರನ ಸಮ್ಮುಖದಲ್ಲಿ ನದಿ ದಾಟಿ ಯುದ್ಧ ಮಾಡುವುದಕ್ಕಾಗಿ ಜೆರಿಕೋವಿನ ಬಯಲಿಗೆ ಬಂದರು.


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ಘೋರಸೇವೆ ಶ್ರಮೆಗಳಿಂದ ತಪ್ಪಿಸಿಕೊಳ್ಳಲಿಕೆ ವಲಸೆಹೋಗಿರುವಳಲ್ಲಾ ‘ಯೆಹೂದಿ’ ಎಂಬಾಕೆ ! ಮ್ಲೇಚ್ಛರ ಮಧ್ಯೆ ವಾಸಮಾಡುತ್ತಿರುವಳಲ್ಲಾ ನೆಮ್ಮದಿಯಿಲ್ಲದೆ ಹಿಮ್ಮೆಟ್ಟಿ ಹಿಡಿದರು ಹಿಂಸಕರೆಲ್ಲಾ ಆಕೆ ಇಕ್ಕಟ್ಟಿಗೆ ಸಿಕ್ಕಿರುವಾಗಲೆ !


ಸರ್ವೇಶ್ವರನ ಆಜ್ಞೆಯ ಮೇರೆಗೆ ಬರುವ ಆ ಗಾಳಿ ಬಿರುಸಾಗಿ ಬಡಿಯುವುದು. ತಮ್ಮ ಜನರಿಗೆ ನ್ಯಾಯ ದಂಡನೆಯನ್ನು ಸ್ವಾಮಿ ಸರ್ವೇಶ್ವರನೇ ವಿಧಿಸುವರು.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಅನಂತರ ಬಾಬಿಲೋನಿಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ಎಳೆದು ತಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ಹಾದಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ;


ಅವರು ಬೆಟ್ಟವನ್ನು ಹತ್ತಿ ಚಿನ್ ಮರುಭೂಮಿಯಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ನಾಡನ್ನು ಸಂಚರಿಸಿ ನೋಡಿದರು.


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


“ಇದಲ್ಲದೆ ಸರ್ವೇಶ್ವರನಾದ ನಾನು ಹೇಳುವುದು ಇದು: ಜುದೇಯದ ಅರಸ ಚಿದ್ಕೀಯನು, ಅವನ ಪ್ರಧಾನಿಗಳು, ಜೆರುಸಲೇಮಿನ ಜನರು ಶೇಷವಾಗಿ ಈ ನಾಡಿನಲ್ಲೆ ಉಳಿದವರು ಮತ್ತು ಈಜಿಪ್ಟ್ ದೇಶಕ್ಕೆ ವಲಸೆಹೋದವರು - ಇವರೆಲ್ಲರು ಕೆಟ್ಟು ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಅಂಥ ಗತಿಗೆ ಇಳಿಸುವೆನು.


ಆ ಗುರುತು ಯಾವುದೆಂದರೆ: ಇಗೋ ಜುದೇಯದ ಅರಸ ಚಿದ್ಕೀಯನನ್ನು ಅವನ ಪ್ರಾಣ ಶತ್ರುವಾದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈ಼ಗೆ ಒಪ್ಪಿಸಿದಂತೆ ಈಜಿಪ್ಟಿನ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಒಪ್ಪಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ’.”


ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.


ಅವರು ಆಯುಧ, ರಥ, ಸರಕುಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಗಳನ್ನು ಧರಿಸಿ, ನಿನಗೆ ವಿರುದ್ಧ ಸುತ್ತುಮುತ್ತಲು ವ್ಯೂಹ ಕಟ್ಟುವರು. ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಕೊಡುವೆನು; ಅವರು ತಮ್ಮ ನ್ಯಾಯಾನುಸಾರ ತೀರ್ಪುನೀಡಿ ನಿನ್ನನ್ನು ದಂಡಿಸುವರು.


ಅವರು ಕ್ರೂರಿಗಳು, ಭಯಂಕರರು. ತಮ್ಮದೇ ಆದ ನ್ಯಾಯನೀತಿಯನ್ನು ರೂಪಿಸಿಕೊಳ್ಳುವಂಥವರು; ತಮ್ಮನ್ನು ತಾವೇ ಗೌರವಿಸಿಕೊಳ್ಳುವ ಅಹಂಭಾವಿಗಳು.


ನಿಮ್ಮ ಮುಖಂಡರೆಲ್ಲ ಒಟ್ಟಿಗೆ ಪಲಾಯನಗೈದರು; ಒಂದೇ ಒಂದು ಬಾಣವನ್ನು ಬಿಡುವುದಕ್ಕೆ ಮುಂಚೆ ಸೆರೆಹೋದರು. ದೂರಕ್ಕೆ ಪಲಾಯನಗೈದಿದ್ದರೂ ಅವರೆಲ್ಲರೂ ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು