ಯೆರೆಮೀಯ 39:9 - ಕನ್ನಡ ಸತ್ಯವೇದವು C.L. Bible (BSI)9 ರಕ್ಷಾದಳದ ನಾಯಕನಾದ ನೆಬೂಜರದಾನನು ನಗರದಲ್ಲಿ ಉಳಿದಿದ್ದವರನ್ನು ಹಾಗು ಮೊದಲೇ ತನ್ನನ್ನು ಮರೆಹೊಕ್ಕಿದವರನ್ನು ಮತ್ತಿತರ ಕೆಲಸಗಾರರನ್ನೆಲ್ಲಾ ಬಾಬಿಲೋನಿಗೆ ಸೆರೆ ಒಯ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ತನ್ನನ್ನು ಮರೆಹೊಕ್ಕವರನ್ನೂ ಇತರ ಸಮಸ್ತ ಜನರನ್ನೂ ಬಾಬೆಲಿಗೆ ಸೆರೆಯೊಯ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿ |
ಬಾಬಿಲೋನಿಯದ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿ ಹಾಗು ಬಾಬಿಲೋನಿಗೆ ಸೆರೆಹೋಗದ ನಾಡಿಗರಲ್ಲಿ ಬಡವರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿ ಹರಡಿತು. ಕಾಡುಮೇಡುಗಳಲ್ಲಿದ್ದ ಎಲ್ಲ ಯಹೂದ್ಯ ಸೈನಿಕರೂ ಸೇನಾಪತಿಗಳೂ ಇದನ್ನು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.