Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:11 - ಕನ್ನಡ ಸತ್ಯವೇದವು C.L. Bible (BSI)

11 ಆ ದಿನ ಬಂದಾಗ ಈ ಜನರಿಗೂ ಜೆರುಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು; ಬಿಸಿಗಾಳಿ ಒಣಗಾಡಿನ ಗುಡ್ಡಗಳಿಂದ ಬೀಸಿ ದೇವಪ್ರಜೆಯೆಂಬ ಯುವತಿಯ ಮೇಲೆ ಬೀಸುವುದು. ಅದು ಹೊಟ್ಟನ್ನು ತೂರುವುದಕ್ಕೆ ಅಲ್ಲ, ಕಾಳನ್ನು ಶೋಧಿಸುವುದಕ್ಕೆ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಕಾಲದಲ್ಲಿ ಈ ಜನರಿಗೂ ಯೆರೂಸಲೇವಿುಗೂ ಈ ಮಾತಾಗುವದು - ಬಿಸಿಗಾಳಿಯು ಅರಣ್ಯದ ಬೋಳು ಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವದಕ್ಕೂ ಶೋಧಿಸುವದಕ್ಕೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:11
28 ತಿಳಿವುಗಳ ಹೋಲಿಕೆ  

ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ನಾಟಿಕೊಂಡಿದ್ದ ಆ ಲತೆ ಸಮೃದ್ಧವಾಗಿಯೇ ಇರುವುದೇ? ಮೂಡಣಗಾಳಿ ಬಡಿಯುವಾಗ ಅದು ಖಂಡಿತವಾಗಿ ಬಾಡುವುದಲ್ಲವೆ? ಬೆಳೆದ ಪಾತಿಯಲ್ಲಿಯೇ ಅದು ಒಣಗಿಹೋಗುವುದಲ್ಲವೆ?”


ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ನುಡಿದನು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಇವರು ಪ್ರಾತಃಕಾಲದ ಮೋಡದಂತೆ ಮಾಯವಾಗುತ್ತಾರೆ. ಇಬ್ಬನಿಯಂತೆ ಕರಗಿಹೋಗುತ್ತಾರೆ. ಬಿರುಗಾಳಿಗೆ ಸಿಕ್ಕಿದ ಹೊಟ್ಟಿನಂತೆ ತೂರಿಹೋಗುತ್ತಾರೆ; ಗವಾಕ್ಷಿಯ ಹೊಗೆಯಂತೆ ಗಾಳಿಯಲ್ಲಿ ತೇಲಿಹೋಗುತ್ತಾರೆ.


ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಮರಿಗಳಿಗೆ ಮೊಲೆಕೊಟ್ಟು ಹಾಲುಣಿಸುತ್ತವೆ ನರಿಗಳು ನನ್ನ ಜನರು ಆಗಿಹರು ಕಾಡಿನ ಉಷ್ಟ್ರಪಕ್ಷಿಯಂತೆ ಕ್ರೂರಿಗಳು.


ಸ್ವಜನರು ನಾಶವಾದ ಕಾರಣದಿಂದಾಗಿ ಹರಿಯುತ್ತಿದೆ ನನ್ನ ಕಣ್ಣೀರು ತೊರೆಯಾಗಿ.


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


“ಆದ್ದರಿಂದ ನನ್ನ ಕಡೆ ನೋಡಬೇಡಿ. ನನ್ನನ್ನು ಸಂತೈಸಲು ಪ್ರಯತ್ನಿಸಬೇಡಿ. ಸತ್ತುಹೋದ ನನ್ನ ಜನರಿಗಾಗಿ ಕಣ್ಣೀರು ಸುರಿಸುತ್ತಿರುವೆನು” ಎಂದೆ ನಾನು.


ಕರುಣಾಮಯಿಗಳಾದ ಹೆಂಗಳೆಯರು ತಮ್ಮ ಕಂದಮ್ಮಗಳನ್ನು ಸ್ವಂತ ಕೈಯಿಂದ ಬೇಯಿಸಿದರು. ನನ್ನ ಜನರ ಪರಿವಿನಾಶದ ಕಾಲದೊಳು ತಮ್ಮ ತಾಯಿಗಳಿಗೆ ತಿಂಡಿಯಾದರು ಆ ಹಸುಳೆಗಳು.


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಸರ್ವೇಶ್ವರನ ಆಜ್ಞೆಯ ಮೇರೆಗೆ ಬರುವ ಆ ಗಾಳಿ ಬಿರುಸಾಗಿ ಬಡಿಯುವುದು. ತಮ್ಮ ಜನರಿಗೆ ನ್ಯಾಯ ದಂಡನೆಯನ್ನು ಸ್ವಾಮಿ ಸರ್ವೇಶ್ವರನೇ ವಿಧಿಸುವರು.


ಆದಕಾರಣ ಬಿರುಗಾಳಿ ಬಡಿದುಕೊಂಡುಹೋಗುವ ಒಣಹುಲ್ಲೋ ಎಂಬಂತೆ ಸರ್ವೇಶ್ವರನಾದ ನಾನು ನಿನ್ನನ್ನು ಚದರಿಸಿಬಿಡುವೆನು.


ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು.


ಬಿರುಗಾಳಿಯಂತೆ ಬಂದು ಮಾಯವಾಗುವವರು ಅವರು; ಸ್ವಂತ ಶಕ್ತಿಯೇ ದೈವ ಎಂದೆಣಿಸುವಂಥ ಅಪರಾಧಿಗಳು.”


ಬಿರುಗಾಳಿ ಅವರನ್ನು ಬಡಿದೆತ್ತಿಕೊಂಡು ಹೋಗುವುದು. ಅವರು ವಿಗ್ರಹಗಳಿಗೆ ಅರ್ಪಿಸುತ್ತಿದ್ದ ಬಲಿಗಳಿಗಾಗಿ ನಾಚಿಕೆಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು