Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:13 - ಕನ್ನಡ ಸತ್ಯವೇದವು C.L. Bible (BSI)

13 ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, [ಆ ಶತ್ರುವು] ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವನ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:13
28 ತಿಳಿವುಗಳ ಹೋಲಿಕೆ  

ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


“ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.


ಹದ್ದುಗಳ ವೇಗದಿಂದ ಹಿಂದಟ್ಟಿಬಂದರು ನಮ್ಮನ್ನು ಬೆನ್ನಟ್ಟಿ ಬೆಟ್ಟಗಳನ್ನೇರಿದರು ಅರಣ್ಯಗಳಲ್ಲಿ ನಮಗಾಗಿ ಹೊಂಚುಹಾಕಿದರು.


ಚೂಪಾಗಿವೆ ಅವರ ಬಾಣಗಳು; ಬಿಗಿದಿವೆ ಬಿಲ್ಲುಗಳು, ಬೆಣಚುಕಲ್ಲಿನಂತಿವೆ ಕುದುರೆಗಳ ಗೊರಸುಗಳು, ಸುತ್ತುತ್ತಿವೆ ಸುಂಟರಗಾಳಿಯಂತವರ ಚಕ್ರಗಳು.


ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗ, ರಣಹದ್ದು ಹೇಗೆ ದೂರದಿಂದ ಹಾರಿಬರುವುದೊ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಮಾಡುವರು.


ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು.


“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೆ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯ ಕೊಡಲಾಯಿತು.


ಜೆರುಸಲೇಮಿನ ಗೋಳು : “ಅಯ್ಯೋ ನಾನು ಗಾಯಗೊಂಡೆ ನನಗೆ ಬಿದ್ದ ಪೆಟ್ಟು ಗಡಸು. ತಗಲಿದೆ ವ್ಯಾಧಿ, ಸಹಿಸಲೇಬೇಕಾದ ಕಾಯಿಲೆ.


ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!


ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.


ಸರ್ವೇಶ್ವರನ ಆಜ್ಞೆಯ ಮೇರೆಗೆ ಬರುವ ಆ ಗಾಳಿ ಬಿರುಸಾಗಿ ಬಡಿಯುವುದು. ತಮ್ಮ ಜನರಿಗೆ ನ್ಯಾಯ ದಂಡನೆಯನ್ನು ಸ್ವಾಮಿ ಸರ್ವೇಶ್ವರನೇ ವಿಧಿಸುವರು.


ಸಿಯೋನಿನಿಂದ ಕೇಳಿಬಂದ ಪ್ರಲಾಪನೆ : “ಅಯ್ಯೋ ಹಾಳಾದೆವು, ನಮ್ಮ ಮಾನಮರ್ಯಾದೆ ಕಳೆದುಹೋಯಿತು ! ನಾವು ನಮ್ಮ ನಾಡನ್ನೇ ಬಿಟ್ಟು ತೊಲಗಬೇಕಾಗಿ ಬಂದಿತು. (ಶತ್ರುಗಳಿಂದ) ನಮ್ಮ ಮನೆಮಠಗಳು ನೆಲಸಮವಾದವು.”


ಶತ್ರುವು ಬೊಚ್ರದ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರಿ ಏರುವನು. ಆ ದಿನದಂದು ಎದೋಮಿನ ಶೂರರ ಎದೆ ಹೆರುವ ಹೆಂಗಸಿನ ಎದೆಯಂತೆ ಅದರುವುದು.


ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ಧೂಳು ನಿನ್ನನ್ನು ಮುಸುಕುವುದು; ಒಡಕು ಬಿದ್ದ ಕೋಟೆಯೊಳಗೆ ಶತ್ರು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಸರಕುಗಾಡಿ, ರಥ, ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಅದರುವುವು.


ನೀನೂ ನಿನ್ನ ಎಲ್ಲ ಪಡೆಗಳೂ ನಿನ್ನೊಂದಿಗಿರುವ ಬಹು ಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿರಿ.’


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”


ಇಗೋ, ಸೇನಾಧೀಶ್ವರ ಸರ್ವೇಶ ಎಂಬ ಹೆಸರುಳ್ಳ ರಾಜಾಧಿರಾಜನ ನುಡಿ: ‘ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದಂತೆ ಉನ್ನತನೊಬ್ಬನು ಬರುವನು, ನನ್ನ ಜೀವದಾಣೆ.’


“ಶತ್ರುವು ಮೋವಾಬಿನ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.


ನನಗೆ ಇನ್ನೊಂದು ದರ್ಶನವಾಯಿತು: ಇಗೋ, ಎರಡು ಬೆಟ್ಟಗಳ ನಡುವೆ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅವು ಕಂಚಿನ ಬೆಟ್ಟಗಳಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು