Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:15 - ಕನ್ನಡ ಸತ್ಯವೇದವು C.L. Bible (BSI)

15 ದಾನ್ ನಗರದಿಂದ ಪ್ರಕಟನೆಯ ಧ್ವನಿ ಕೇಳಿ ಬರುತ್ತದೆ. ಎಫ್ರಯಿಮಿನ ಬೆಟ್ಟದಿಂದ ಕೇಡನ್ನು ಸಾರಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಹಾ, ದಾನ್ ನಗರದಿಂದ ಪ್ರಕಟಣೆಯ ಧ್ವನಿಯು ಕೇಳಿಬರುತ್ತದೆ, ಎಫ್ರಾಯೀಮಿನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ದಾನಿನಿಂದ ಪ್ರಕಟನೆಯ ಧ್ವನಿಯು ಕೇಳಬರುತ್ತದೆ, ಎಫ್ರಾಯೀವಿುನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೇಳಿರಿ, ದಾನ್ ಪ್ರದೇಶದಿಂದ ದೂತನ ಸ್ವರವು ಕೇಳಿಬರುತ್ತಿದೆ. ಎಫ್ರಾಯೀಮ್ ಬೆಟ್ಟಪ್ರದೇಶದಿಂದ ಒಬ್ಬನು ಕೆಟ್ಟ ಸಮಾಚಾರವನ್ನು ತರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ಒಂದು ಶಬ್ದವು ದಾನಿನಿಂದ ಪ್ರಕಟಮಾಡುತ್ತದೆ; ಎಫ್ರಾಯೀಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:15
8 ತಿಳಿವುಗಳ ಹೋಲಿಕೆ  

ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”


ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ‘ದಾನ್’ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲ ಪುರುಷನೂ ಇಸ್ರಯೇಲನ ಮಗನೂ ಆದವನ ಹೆಸರು.


ಅಂತೆಯೇ ಇಸ್ರಯೆಲರು ನಫ್ತಾಲಿ ಕುಲದವರ ಮಲೆನಾಡಿನ ಪ್ರದೇಶವಾದ ಗಲಿಲೇಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಯಿಮ್ ಮಲೆನಾಡಿನ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೂದವಂಶದ ಮಲೆನಾಡಿನ ಹೆಬ್ರೋನ್ ಎನಿಸಿಕೊಳ್ಳುವ ಕಿರ್ಯತರ್ಬ ಎಂಬ ನಗರಗಳನ್ನು ನೇಮಿಸಿದರು.


ಅದಕ್ಕೆ ಯೆಹೋಶುವನು, “ಮಹಾಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು.


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಇದೋ ಸುದ್ದಿ, ಕೇಳಿಬರುತ್ತಿದೆ ಸುದ್ದಿ ! ದೊಡ್ಡ ಕೋಲಾಹಲವೆದ್ದಿದೆ ಉತ್ತರ ನಾಡಿನಲ್ಲಿ : ‘ಅದನ್ನು ನರಿಗಳ ಬೀಡಾಗಿಸಿರಿ ಜುದೇಯದ ನಗರಗಳನ್ನು ನಾಶಮಾಡಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು