Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:17 - ಕನ್ನಡ ಸತ್ಯವೇದವು C.L. Bible (BSI)

17 ಹೊಲ ಕಾಯುವವರಂತೆ ಅದನ್ನು ಸುತ್ತುಗಟ್ಟುವರು. ಏಕೆಂದರೆ ಅದರ ಜನರು ಸರ್ವೇಶ್ವರ ಸ್ವಾಮಿಗೇ ತಿರುಗಿಬಿದ್ದಿದ್ದಾರೆ. ಇದು ಆ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ನಗರಿಯು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹೊಲವನ್ನು ಕಾಯುವ ಜನರಂತೆ ವೈರಿಗಳು ಜೆರುಸಲೇಮನ್ನು ಮುತ್ತಿಕೊಂಡಿದ್ದಾರೆ. ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, ಅದಕ್ಕಾಗಿ ನಿನ್ನ ಮೇಲೆ ಶತ್ರುಗಳು ಬೀಳುತ್ತಿದ್ದಾರೆ” ಎಂದು ಯೆಹೋವನು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿದ್ದಾರೆ. ಏಕೆಂದರೆ ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:17
16 ತಿಳಿವುಗಳ ಹೋಲಿಕೆ  

ನೀವಾದರೋ ನನ್ನ ಅಧೀನದಿಂದ ತಪ್ಪಿಸಿಕೊಂಡು ಎದುರಿಬೀಳುವ ಹೃದಯವುಳ್ಳವರಾಗಿ ಇದ್ದೀರಿ. ಹದ್ದುಮೀರಿ ನನ್ನನ್ನು ಬಿಟ್ಟುಹೋಗಿ ಇದ್ದೀರಿ.


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,


ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.


ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.


ಅವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದ. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು