Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:19 - ಕನ್ನಡ ಸತ್ಯವೇದವು C.L. Bible (BSI)

19 ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತೇನೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತೂರಿಯ ಶಬ್ದವನ್ನೂ ಯುದ್ಧಘೋಷವನ್ನೂ ಕೇಳುತ್ತೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:19
48 ತಿಳಿವುಗಳ ಹೋಲಿಕೆ  

ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


“ಆದ್ದರಿಂದ ನನ್ನ ಕಡೆ ನೋಡಬೇಡಿ. ನನ್ನನ್ನು ಸಂತೈಸಲು ಪ್ರಯತ್ನಿಸಬೇಡಿ. ಸತ್ತುಹೋದ ನನ್ನ ಜನರಿಗಾಗಿ ಕಣ್ಣೀರು ಸುರಿಸುತ್ತಿರುವೆನು” ಎಂದೆ ನಾನು.


ಮೋವಾಬಿನ ನಿಮಿತ್ತ ಮಿಡಿಯುತಿದೆಯೆನ್ನ ಮನ ದುಃಖದಿಂದ, ವೀಣೆಯ ತಂತಿಯಂತೆ ತುಡಿಯುತಿದೆಯೆನ್ನ ಅಂತರಂಗ ಕೀರ್ ಹೆರೆಷಿನ ನಿಮಿತ್ತ.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ.


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.


ದಾನಿಯೇಲನಾದ ನನ್ನ ಮನ ಒಳಗೇ ವ್ಯಥೆಗೊಂಡಿತು. ನನ್ನ ಮನಸ್ಸಿನಲ್ಲಿ ತೋಚಿದ ದರ್ಶನಗಳು ನನ್ನನ್ನು ಕಳವಳಪಡಿಸಿದವು.


ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.


ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II


ಸಹೋದರರೇ, ನನ್ನ ಸ್ವಜನರಾದ ಇಸ್ರಯೇಲರು ಜೀವೋದ್ಧಾರ ಹೊಂದಬೇಕೆಂದೇ ನನ್ನ ಹಾರ್ದಿಕ ಹಂಬಲ. ನಾನು ದೇವರಲ್ಲಿ ಮಾಡುವ ಪ್ರಾರ್ಥನೆಯೂ ಇದೇ.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ.


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ಪ್ರವಾದಿಗಳ ವಿಷಯ : ನನ್ನ ಗುಂಡಿಗೆ ಒಡೆದುಹೋಗಿದೆ ನನ್ನೆಲುಬುಗಳು ನಡುನಡುಗುತ್ತಿವೆ ಸರ್ವೇಶ್ವರನಿಗೆ, ಆತನ ಪವಿತ್ರವಾಕ್ಯಕ್ಕೆ ಪರವಶನಾದ ನಾನು ಅಮಲೇರಿದಂತವನಾದೆ. ಹೌದು, ಮದ್ಯಪಾನಕ್ಕೆ ಸೋತ ಮನುಷ್ಯನಂತಾದೆ.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ಎಷ್ಟರವರೆಗೆ ನಾನು ಯುದ್ಧಪತಾಕೆಗಳನ್ನು ನೋಡುತ್ತಿರಲಿ ! ಯುದ್ಧ ಕಹಳೆಗಳು ಮೊಳಗುವುದನ್ನು ಕೇಳುತ್ತಿರಲಿ !


ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ.


ಪ್ರಭುವಿಗೆ ಸ್ತುತಿಸ್ತೋತ್ರ ಅಲ್ಲೆಲೂಯ I ಮನವೇ, ವಂದಿಸು ಆತನನು ಅಲ್ಲೆಲೂಯ II


ನಿನ್ನ ಶಾಸ್ತ್ರವನು ಜನ ಪಾಲಿಸದ ಕಾರಣ I ಹರಿಯುತ್ತಿದೆ ಧಾರೆಯಾಗಿ ನನ್ನ ಕಣ್ಕಣ II


ನಿನ್ನ ಶಾಸ್ತ್ರದ ಭ್ರಷ್ಠರನು ಕಂಡಾಗ I ನನಗೆ ಬರುತ್ತದೆ ಕೋಪೋದ್ರೇಕ II


ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ನನ್ನ ಅಂತರಂಗವೇ, ಭಜಿಸು ಆತನನು I ನೆನೆ ಆತನ ಪರಮಪಾವನ ನಾಮವನು II


“ನೀನೇ ನನ್ನೊಡೆಯ"ನೆಂದು ನಾ ನುಡಿದೆ I ನಿನ್ನ ಹೊರತು ನನಗಿಲ್ಲ ಒಳಿತು” ಎಂದೇ II


ಶತ್ರುಗಳನು ಕೊಚ್ಚಿಕೊಂಡು ಹೋಯಿತು ಪೂರ್ವಪ್ರಸಿದ್ಧವಾದ ಆ ಕೀಷೋನ್ ಹೊಳೆಯು. ನನ್ನ ಮನವೇ, ನೀ ಧೈರ್ಯದಿಂದ ಮುಂದೆ ಸಾಗು.


ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಪೀಡಿಸುವ ಶತ್ರುಗಳ ಮೇಲೆ ಯುದ್ಧಕ್ಕೆ ಹೊರಡುವಾಗ ಆ ಕಹಳೆಗಳನ್ನು ಆರ್ಭಟವಾಗಿ ಮೊಳಗಿಸಬೇಕು. ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ನೆನಪಿಗೆ ತಂದುಕೊಂಡು ಶತ್ರುಗಳ ಕೈಯಿಂದ ನಿಮ್ಮನ್ನು ಬಿಡಿಸುವರು.


ನನ್ನ ಮನವೇ, ಒಳಗಾಗಬೇಡ ಅವರ ದುರಾಲೋಚನೆಗೆ ನನ್ನ ಪ್ರಾಣವೇ, ಸೇರಬೇಡ ನೀನವರ ಗುಂಪಿಗೆ ಕೊಂದರವರು ನರರನು ಕೋಪೋದ್ರೇಕದಿಂದ ಊನಪಡಿಸಿದರು ಎತ್ತುಗಳನ್ನು ಮದದಿಂದ.


ರಣಕಹಳೆಯು ನಿರ್ದಿಷ್ಟವಾದ ಧ್ವನಿಯನ್ನು ಮೊಳಗಿಸದಿದ್ದರೆ ಯಾರು ತಾನೇ ಯುದ್ಧಸನ್ನದ್ಧರಾಗುತ್ತಾರೆ?


ಜೆರುಸಲೇಮಿನ ಜನರು : “ಈ ಸುದ್ದಿಯನ್ನು ಕೇಳಿದಾಗ ನಮ್ಮ ಕೈಗಳು ಜೋಲುಬಿದ್ದುವು. ಪ್ರಸವವೇದನೆಯಂಥ ಯಾತನೆ ನಮ್ಮನ್ನು ಆವರಿಸಿತು.


ನನ್ನ ಪ್ರಜೆಯೆಂಬಾಕೆಯ ವೇದನೆಯಿಂದಲೆ ನಾನು ಅನುಭವಿಸುತ್ತಿರುವೆ ಮನೋಯಾತನೆ.


ನಾವು ಈಜಿಪ್ಟಿನಲ್ಲೇ ವಾಸಮಾಡುತ್ತೇವೆ. ಅದು ಯುದ್ಧ ಕಾಣದ, ರಣಕಹಳೆ ಕೇಳದ, ಕೂಳಿನ ಕೊರತೆಯಿಲ್ಲದ ದೇಶ.’ ಎಂದುಕೊಳ್ಳಬೇಡಿ.


ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ.


ಇಗೋ ಯುದ್ಧದ ಆರ್ಭಟ! ಮಹಾವಿನಾಶದ ಕೂಗಾಟ ನಾಡಿನೊಳಗೆಲ್ಲ!


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


ಅಲ್ಲಿದ್ದಾಗ ಅವನು ಇದ್ದಕ್ಕಿದ್ದ ಹಾಗೆ, “ಅಪ್ಪಾ, ನನ್ನ ತಲೆ ಸಿಡಿಯುತ್ತಿದೆ, ಸಿಡಿಯುತ್ತಿದೆ,” ಎಂದು ಕೂಗಿಕೊಂಡನು. ತಂದೆ ಒಬ್ಬ ಸೇವಕನನ್ನು ಕರೆದು, “ಇವನನ್ನು ತಾಯಿಯ ಹತ್ತಿರ ತೆಗೆದುಕೊಂಡು ಹೋಗು,” ಎಂದು ಆಜ್ಞಾಪಿಸಿದನು.


ಎಂದು ಹೇಳಿ ಬಿಗಿ ಮುಖದಿಂದ, ಸ್ಥಿರದೃಷ್ಟಿಯಿಂದ ಹಜಾಯೇಲನನ್ನೇ ದಿಟ್ಟಿಸಿ ನೋಡಿ ಅಳತೊಡಗಿದನು.


ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


“ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು