Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:22 - ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:22
42 ತಿಳಿವುಗಳ ಹೋಲಿಕೆ  

ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


ದೇವರೊಡನೆ ಸತ್ಸಂಬಂಧಿತರಾರೂ ಇಲ್ಲ ಸನ್ಮತಿಗಳು ಒರ್ವರೂ ಇಲ್ಲ ಆತನನ್ನು ಅರಸುವವರಂತೂ ಇಲ್ಲವೇ ಇಲ್ಲ.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ತಾವೇ ಜ್ಞಾನಿಗಳೆಂದುಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು.


ಅವರು ತಮ್ಮ ದೇವರ ಬಳಿಗೆ ಹಿಂದಿರುಗದಂತೆ ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರ ಅವರಲ್ಲಿ ನೆಲೆಗೊಂಡಿದೆ. ಅವರು ಸರ್ವೇಶ್ವರನನ್ನು ಅರಿಯರು.


ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


“ಆಲೋಚನೆಯಿಲ್ಲದ ಜನರಿವರು ಸ್ವಲ್ಪವಾದರೂ ವಿವೇಕವಿಲ್ಲದವರು.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಎಥಿಯೋಪಿಯದವನು ತನ್ನ ಚರ್ಮದ ಬಣ್ಣವನ್ನು ಮಾರ್ಪಡಿಸಬಲ್ಲನೆ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೆ? ಅಂತೆಯೇ ದುಷ್ಟತನದಲ್ಲಿ ಅಷ್ಟಾಗಿ ನುರಿತ ನೀನು ಶಿಷ್ಟತನದಲ್ಲಿ ನಡೆಯಲಾರೆ.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ಹೀಗಿರಲು ನಾನು, “ಈ ಜನರು ಬಡವರು, ಮೂಢರು, ಸರ್ವೇಶ್ವರನ ಮಾರ್ಗವನ್ನೂ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗ ಹಾಗು ಬಹು ಯುಕ್ತಿವಂತ.


ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ದುರ್ಜನರು ನನ್ನ ಜನರನು ಕೂಳಿನಂತೆ ನುಂಗುವುದೇಕೆ? I ದೇವರನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? II


ಬುದ್ಧಿಹೀನರು, ಮಂದಮತಿಗಳು, ಕತ್ತಲಲಿ ನಡೆವವರು ನೀವು I ಇದರಿಂದಲೆ ಕದಲುತ್ತಿರುವುವು ಧರೆಯ ಅಸ್ತಿವಾರಗಳು II


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


ಎಷ್ಟರವರೆಗೆ ನಾನು ಯುದ್ಧಪತಾಕೆಗಳನ್ನು ನೋಡುತ್ತಿರಲಿ ! ಯುದ್ಧ ಕಹಳೆಗಳು ಮೊಳಗುವುದನ್ನು ಕೇಳುತ್ತಿರಲಿ !


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ಸರ್ವಶಕ್ತ ದೇವರು ಇಂತೆನ್ನುತ್ತಾರೆ: “ನಿನ್ನ ಮನಸ್ಸು ಮೋಹಪಾಶಕ್ಕೆ ಸಿಕ್ಕಿ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಿಣಿಯಾಗಿರುವೆ.


“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.


ಜೋಸೆಫನ ದಣಿ ಮನೆಗೆ ಬರುವವರೆಗೂ ಆ ಬಟ್ಟೆಯನ್ನು ತನ್ನಲ್ಲೇ ಇಟ್ಟುಕೊಂಡಿದ್ದಳು.


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.


ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?


ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು