Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:23 - ಕನ್ನಡ ಸತ್ಯವೇದವು C.L. Bible (BSI)

23 ನಾನು ಭೂಮಿಯನ್ನು ನೋಡಿದೆ, ಅದು ಬಿಕೋ ಎನ್ನುತ್ತಿತ್ತು. ಆಕಾಶವನ್ನು ದಿಟ್ಟಿಸಿದೆ, ಅದರಲ್ಲಿ ಬೆಳಕೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು [ದಿವ್ಯಜ್ಞಾನದಿಂದ] ನೋಡಿದೆನು, ಹಾ, ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಭೂಮಿಯ ಕಡೆಗೆ ನೋಡಿದೆ, ಭೂಮಿಯು ಬರಿದಾಗಿತ್ತು. ಭೂಮಿಯ ಮೇಲೇನೂ ಇರಲಿಲ್ಲ. ನಾನು ಆಕಾಶದ ಕಡೆಗೆ ನೋಡಿದೆ, ಅದರ ಬೆಳಕು ಹೋಗಿಬಿಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ, ಹಾಳಾಗಿಯೂ, ಶೂನ್ಯವಾಗಿಯೂ ಇತ್ತು. ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:23
19 ತಿಳಿವುಗಳ ಹೋಲಿಕೆ  

“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು.


ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.


ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.


ಗುರುಗುಟ್ಟುತಿಹರು ಯೆಹೂದ್ಯರ ಮೇಲೆ ಭೋರ್ಗರೆಯುವ ಸಮುದ್ರದಂತೆ; ನಾಡಿನೆಲ್ಲೆಡೆ ಕವಿದಿಹುದು ಗಾಡಾಂಧಕಾರ; ತಾಂಡವವಾಡುತಿಹುದು ನೋಡಿದೆಡೆ ದುಃಖದುಗುಡ; ಮೋಡ ಕವಿದು ಇರುಳಾಗಿಹುದು ಹಗಲೊಳು ಕೂಡ !


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಆಕಾಶ ಮಂಡಲವೇ, ಇದನ್ನು ಕೇಳಿ ನಿಬ್ಬೆರಗಾಗು; ತತ್ತರಿಸಿ ಹಾಳಾಗು!” ಇದು ಸರ್ವೇಶ್ವರ ಸ್ವಾಮಿಯ ವಾಣಿ.


ಆತ ನನ್ನನ್ನು ಕರೆದೊಯ್ದು ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಸಿದ.


ಆ ದಿನ ಬಂದಾಗ ಚಳಿಯಾಗಲೀ ಮಂಜಾಗಲೀ ಇರದು. ಕತ್ತಲು ಕವಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು