Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:25 - ಕನ್ನಡ ಸತ್ಯವೇದವು C.L. Bible (BSI)

25 ಕಣ್ಣೆತ್ತಿ ನೋಡಿದೆ, ಏನಾಶ್ಚರ್ಯ ! ಜನರೊಬ್ಬರೂ ಇಲ್ಲ, ಆಕಾಶದ ಪಕ್ಷಿಗಳೆಲ್ಲವೂ ಕಾಣೆಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ನೋಡಲಾಗಿ ಅಯ್ಯೋ, ಜನವೇ ಇರಲಿಲ್ಲ, ಆಕಾಶದ ಸಕಲ ಪಕ್ಷಿಗಳು ಹಾರಿಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ನೋಡಲಾಗಿ ಅಯ್ಯೋ, ಜನವೇ ಇರಲಿಲ್ಲ, ಆಕಾಶದ ಸಕಲ ಪಕ್ಷಿಗಳು ಹಾರಿಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ನೋಡಿದರೂ ಅಲ್ಲಿ ಜನರಿರಲಿಲ್ಲ. ಆಕಾಶದ ಎಲ್ಲಾ ಪಕ್ಷಿಗಳು ಹಾರಿಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿ ಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:25
6 ತಿಳಿವುಗಳ ಹೋಲಿಕೆ  

ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಭೂಜಂತುಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಹಾಗು ಜಗದ ಸಕಲ ಮಾನವರು ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವುವು, ಝರಿಗಳು ಕವಚಿಕೊಳ್ಳುವುವು, ಎಲ್ಲ ಗೋಡೆಗಳು ನೆಲಸಮವಾಗುವುವು.


ಇಂಥವುಗಳಿಗಾಗಿ ನಾನು ಅವರನ್ನು ಹಿಂಸಿಸಬಾರದೆ? ಇಂಥ ಜನಾಂಗದ ಮೇಲೆ ಸೇಡನ್ನು ತೀರಿಸಿಕೊಳ್ಳದಿರುವೆನೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು