Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:30 - ಕನ್ನಡ ಸತ್ಯವೇದವು C.L. Bible (BSI)

30 ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಎಲೈ, [ನಗರಿಯೇ,] ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು ನೀಲಾಂಜನದಿಂದ ವಿಶಾಲಾಕ್ಷಿಯಾದರೇನು, ನಿನ್ನನ್ನು ಸೊಗಸು ಮಾಡಿಕೊಳ್ಳುವದು ವ್ಯರ್ಥ; ನಿನ್ನ ವಿುಂಡರು ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:30
27 ತಿಳಿವುಗಳ ಹೋಲಿಕೆ  

ಯೇಹುವು ಜೆಸ್ರೀಲಿಗೆ ಬಂದನು. ಈಜೆಬೆಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು, ಕಿಟಕಿಯಿಂದ ನೋಡುತ್ತಾ ನಿಂತಳು.


“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.


ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.


ನಿನ್ನೊಡನೆ ಗೆಳೆಯರಂತೆ ಬಾಳಲು ನೀನೇ ಪಳಗಿಸಿದವರನ್ನು ನಿನಗೆ ಒಡೆಯರನ್ನಾಗಿ ನಾನು ನೇಮಿಸುವಾಗ ಏನು ಹೇಳುವೆ? ಹೆರುವವಳಿಗೆ ಬರುವಂಥ ವೇದನೆ ಆಗ ನಿನಗೆ ಬರದೆ ಇರುವುದೆ?


ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.”


ಅವರು ಒಮ್ಮನಸ್ಸಿನವರಾಗಿ ತಮ್ಮ ಶಕ್ತಿಸಾಮರ್ಥ್ಯವನ್ನೂ ಅಧಿಕಾರವನ್ನೂ ಆ ಮೃಗಕ್ಕೆ ಒಪ್ಪಿಸಿಬಿಡುತ್ತಾರೆ.


ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.


ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ನಿನ್ನ ಹೃದಯ ಅವಳ ಬೆಡಗನ್ನು ಮೋಹಿಸದಿರಲಿ; ಕಣ್ಣು ಮಿಟುಕಿಸಿ ಅವಳು ನಿನ್ನನ್ನು ವಶಮಾಡಿಕೊಳ್ಳದಿರಲಿ.


ಇಗೋ, ಅವನನ್ನು ಎದುರುಗೊಳ್ಳುತ್ತಾಳೆ ವೇಷಧಾರಿಯಾದ ಕಪಟಸ್ತ್ರೀಯೊಬ್ಬಳು.


‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ !


ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.


ನನ್ನ ಮಿತ್ರಮಂಡಲಿಯವರೇ ನಿನ್ನನ್ನು ಬೆನ್ನಟ್ಟಿಬಂದಿದ್ದಾರೆ. ನಿನ್ನನ್ನು ಗಡಿಯಾಚೆ ತಳ್ಳಿಬಿಟ್ಟಿದ್ದಾರೆ. ನಿನ್ನ ಆಪ್ತರೇ ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ತಿಳಿಗೇಡಿಯಾದ ನಿನಗೆ ಉರುಲೊಡ್ಡಿದ್ದಾರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು