Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:31 - ಕನ್ನಡ ಸತ್ಯವೇದವು C.L. Bible (BSI)

31 ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಚೀಯೋನ್ ನಗರಿಯು ಬೇನೆ ತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವದನ್ನು ನಾನು ಕೇಳಿದ್ದೇನೆ; ಏದುತ್ತಾ ಕೈಚಾಚಿ - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಆತ್ಮವು ಉಡುಗುತ್ತದೆ ಎಂದು ಬಡುಕೊಳ್ಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಏಕೆಂದರೆ ಪ್ರಸವವೇದನೆ ಪಡುವವಳಂತೆ, ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, “ಅಯ್ಯೋ, ನನಗೀಗ ಕಷ್ಟ! ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” ಎಂದು ಅರಚಿಕೊಳ್ಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:31
35 ತಿಳಿವುಗಳ ಹೋಲಿಕೆ  

ಸಿಯೋನ್ ನಗರಿ ಕೈಚಾಚಿ ಕೂಗಿಕೊಂಡರೂ ಸಂತೈಸುವವರಾರೂ ಇಲ್ಲ. ನೆರೆಹೊರೆಯವರೇ ಆಕೆಯ ವಿರೋಧಿಗಳಾಗಲೆಂದು ಸರ್ವೇಶ್ವರ ತೀರ್ಮಾನಿಸಿದ್ದಾನಲ್ಲಾ ! ಅವರ ನಡುವೆ ಹೊಲೆಯಾದ ಹೆಣ್ಣಿನಂತೆ ಜೆರುಸಲೇಮ್ ಬಿದ್ದಿದ್ದಾಳಲ್ಲಾ !


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ನಿನ್ನೊಡನೆ ಗೆಳೆಯರಂತೆ ಬಾಳಲು ನೀನೇ ಪಳಗಿಸಿದವರನ್ನು ನಿನಗೆ ಒಡೆಯರನ್ನಾಗಿ ನಾನು ನೇಮಿಸುವಾಗ ಏನು ಹೇಳುವೆ? ಹೆರುವವಳಿಗೆ ಬರುವಂಥ ವೇದನೆ ಆಗ ನಿನಗೆ ಬರದೆ ಇರುವುದೆ?


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ!


ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.


ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ.


ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !


“ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ.


ಈ ಸುದ್ದಿ ಬಿತ್ತು ಬಾಬಿಲೋನಿನ ಅರಸನ ಕಿವಿಗೆ ಅವನ ಕೈಗಳಿದೋ ಜೋಲುಬಿದ್ದಿವೆ ಅವನನ್ನು ಹಿಡಿದಿದೆ ಪ್ರಸವವೇದನೆಯಂಥ ಯಾತನೆ.


ದಮಸ್ಕಸ್ ಕುಂದಿದೆ, ಓಡಿಹೋಗಲು ಸಿದ್ಧವಿದೆ. ಅದಕ್ಕೆ ನಡುಕ ಹುಟ್ಟಿದೆ. ಪ್ರಸವವೇದನೆಗೆ, ಕಷ್ಟಸಂಕಟಕ್ಕೆ ಅದು ಒಳಗಾಗಿದೆ.


ಶತ್ರುವು ಬೊಚ್ರದ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರಿ ಏರುವನು. ಆ ದಿನದಂದು ಎದೋಮಿನ ಶೂರರ ಎದೆ ಹೆರುವ ಹೆಂಗಸಿನ ಎದೆಯಂತೆ ಅದರುವುದು.


ನಗರಗಳನ್ನು ಹಿಡಿಯುವನು, ಕೋಟೆಗಳನ್ನು ಆಕ್ರಮಿಸುವನು. ಆ ದಿನದಂದು, ಹೆರುವ ಹೆಂಗಸಿನ ಎದೆಯಂತೆ ಅದರುವುದು ಮೋವಾಬಿನ ಶೂರರ ಎದೆ.


“ಬಾರೂಕನೇ, ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿ ನಿನಗೆ ಹೇಳುವುದನ್ನು ಕೇಳು: ನೀನು, ‘ಅಯ್ಯೋ, ನನಗೆ ಕೇಡು!


ಗಂಡಸು ಪ್ರಸವವೇದನೆ ಪಡುವುದುಂಟೆ, ಹೇಳು? ಆದರೂ ಪ್ರತಿಯೊಬ್ಬನು ಹೆರುವ ಮಹಿಳೆಯಂತೆ ಸೊಂಟ ಹಿಸಿಕಿಕೊಳ್ಳುವುದು ನನ್ನ ಕಣ್ಣಿಗೆ ಬೀಳುತ್ತಿದೆ ಏಕೆ? ಅವರ ಮುಖಗಳು ಬಿಳಿಚಿಕೊಂಡಿವೆ ಏಕೆ?


‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ !


ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.


ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”


ಜೆರುಸಲೇಮಿನ ಗೋಳು : “ಅಯ್ಯೋ ನಾನು ಗಾಯಗೊಂಡೆ ನನಗೆ ಬಿದ್ದ ಪೆಟ್ಟು ಗಡಸು. ತಗಲಿದೆ ವ್ಯಾಧಿ, ಸಹಿಸಲೇಬೇಕಾದ ಕಾಯಿಲೆ.


ಸುಂದರವೂ, ಸೊಂಪಾದ ಹಸಿರುಗಾವಲಿಗೆ ಸಮಾನವೂ ಆದ ಸಿಯೋನ್ ನಗರ ನಾಶವಾಗಲಿದೆ.


ನನ್ನನ್ನೇ ತಡೆಹಿಡಿದೆನು : ಆದರೀಗ ಸಮಯ ಬಂದಿಹುದು; ಪ್ರಸವವೇದನೆಯನು ಅನುಭವಿಸುವ ಸ್ತ್ರೀಯಂತೆ ಅಬ್ಬರಿಸುವೆನು


ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ.


ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II


“ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.


ಅನಂತರ ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಹೆಣ್ಣುಗಳ ದೆಸೆಯಿಂದ ನನ್ನ ಬಾಳು ಬೇಸರವಾಗಿದೆ. ಯಕೋಬನು ಕೂಡ ಈ ನಾಡಿನ ಹೆಣ್ಣನ್ನು ಆರಿಸಿಕೊಂಡು ಇಂಥ ಹಿತ್ತಿಯ ಹುಡುಗಿಯನ್ನೇ ಮದುವೆಮಾಡಿಕೊಂಡರೆ ನಾನು ಇನ್ನು ಬದುಕಿ ಪ್ರಯೋಜನ ಇಲ್ಲ,” ಎಂದು ಹೇಳಿದಳು.


ಹೆರಿಗೆ ಹತ್ತಿರವಾದ ಗರ್ಭಿಣಿ ಚೀರುವಂತೆ ಯಾತನೆಪಡುವ ಬೇನೆಯಿಂದಾಕೆ ಅರಚುವಂತೆ ಮಾಡಿರುವೆ, ಸರ್ವೇಶ್ವರಾ, ನಿನಗಾಗಿ ನಾವು ಮೊರೆಯಿಡುವಂತೆ.


ನೀನೀಗ ರೋದಿಸುವುದೇಕೆ? ಪ್ರಸವವೇದನೆ ಪಡುವವಳಂತೆ ನರಳುವುದೇಕೆ? ನಿನಗೆ ರಾಜನಿಲ್ಲವೇ? ನಿನ್ನ ಸಲಹೆಗಾರ ಸತ್ತುಹೋದನೇ?


ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು