Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:4 - ಕನ್ನಡ ಸತ್ಯವೇದವು C.L. Bible (BSI)

4 ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:4
36 ತಿಳಿವುಗಳ ಹೋಲಿಕೆ  

ಆದುದರಿಂದ ಅವರ ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿ.


ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ಏಕೆಂದರೆ ಈ ಎಲ್ಲ ಜನಾಂಗದವರು, ಇಸ್ರಯೇಲ್ ವಂಶದವರು ಕೂಡ, ಹೃದಯದಲ್ಲಿ ಸುನ್ನತಿಯಿಲ್ಲದವರು. ಇದು ಸರ್ವೇಶ್ವರನಾದ ನಾನು ಆಡುವ ಮಾತು.”


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.


ಕಾಲವು ಹೊಟ್ಟಿನಂತೆ ಹಾರಿಹೋಗುವ ಮೊದಲು, ಸರ್ವೇಶ್ವರಸ್ವಾಮಿಯ ಉಗ್ರಕೋಪವು ನಿಮ್ಮ ಮೇಲೆ ಎರಗುವ ಮುಂಚೆ, ಅವರ ಸಿಟ್ಟಿನ ದಿನ ನಿಮ್ಮನ್ನು ಮುಟ್ಟುವುದಕ್ಕೆ ಮುನ್ನ ಸೇರ ಬನ್ನಿ, ಕೂಡಿ ಬನ್ನಿ.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ, ನಿಮ್ಮ ಮೇಲೆ ದೊರೆತನಮಾಡುವೆನು;


ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.


ಸುರಿಸಿದ್ದಾನೆ ಸರ್ವೇಶ್ವರ ತನ್ನ ರೋಷಾಗ್ನಿಯನ್ನು ತೀರಿಸಿಕೊಂಡಿದ್ದಾನೆ ತನ್ನ ಉಗ್ರಕೋಪವನ್ನು. ಆತ ಹೊತ್ತಿಸಿದ ಬೆಂಕಿಗೆ ಸಿಯೋನಿನ ಅಸ್ತಿವಾರ ಆಹುತಿಯಾಗಿದೆ.


ಆ ರಕ್ತದಿಂದ ರೋಷವೆದ್ದು ಮುಯ್ಯಿಗೆ ಮುಯ್ಯಿ ತೀರಿಸಲೆಂದು, ಅದನ್ನು ನಾನು ಇಂಗಗೊಡಿಸದೆ ಬರೀ ಬಂಡೆಯ ಮೇಲೆ ನಿಲ್ಲಿಸಿದ್ದೇನೆ.


ವ್ಯಭಿಚಾರಮಾಡುವಂಥ, ರಕ್ತ ಹರಿಸುವಂಥ ಹೆಂಗಸರಿಗೆ ವಿಧಿಸತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ನನ್ನ ಕೋಪೋದ್ರೇಕವನ್ನೂ ರೋಷಾವೇಶವನ್ನೂ ರಕ್ತದಂತೆ ನಿನ್ನ ಮೇಲೆ ಸುರಿಸುವೆನು.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.


ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.


ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.


ನಾನೇ ನಿಮಗೆ ವಿರುದ್ಧವಾಗಿ ಕಡುಕೋಪದಿಂದ, ರೋಷಾವೇಶದಿಂದ, ಕ್ರೋಧಭರಿತನಾಗಿ, ಚಾಚಿದ ಕೈಯಿಂದಲೂ ಭುಜಪರಾಕ್ರಮದಿಂದಲೂ ಯುದ್ಧಮಾಡುವೆನು.


ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ನಾನೂ ರೋಷ ತೀರಿಸಿಕೊಳ್ವೆ ಚಪ್ಪಾಳೆ ತಟ್ಟಿ ಇದು ಸರ್ವೇಶ್ವರನಾದ ನನ್ನ ನುಡಿ.”


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ನೀನು ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ನಡೆದರೆ, ನೀನು ಮಾಡಿಸಿಕೊಂಡಿರುವ ಸುನ್ನತಿಗೆ ಅರ್ಥವಿದೆ. ಆದರೆ ನಿನ್ನ ನಡತೆ ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾಗಿದ್ದರೆ ನೀನು ಸುನ್ನತಿ ಮಾಡಿಸಿಕೊಂಡಿದ್ದರೂ ಮಾಡಿಸಿಕೊಳ್ಳದಂತೆಯೇ ಸರಿ.


ನಾನು ಅವರಿಗೆ ವಿರುದ್ಧವಾಗಿ ವರ್ತಿಸಿ ಶತ್ರುದೇಶದಲ್ಲಿ ಸೆರೆ ಸೇರಿಸಬೇಕಾಯಿತೆಂದು ಅರಿತುಕೊಂಡು, ತಮ್ಮ ಮೊಂಡುತನವನ್ನು ಬಿಟ್ಟು, ನನ್ನ ಆಜ್ಞೆಗೆ ತಲೆಬಾಗಿ, ತಮ್ಮ ಪಾಪ ಪರಿಣಾಮದ ಶಿಕ್ಷೆಯನ್ನು ಸ್ವೀಕರಿಸಿದ್ದೇ ಆದರೆ,


ಇಸ್ರಯೇಲಿನ ಪರಂಜ್ಯೋತಿಯಾದ ದೇವರು ಅಗ್ನಿಯಂತಾಗುವರು; ಇಸ್ರಯೇಲಿನ ಪರಮಪಾವನ ಸ್ವಾಮಿ ಜ್ವಾಲೆಯಂತಾಗುವರು; ಅದು ಒಂದೇ ಒಂದು ದಿನದಲ್ಲಿ ಅಸ್ಸೀರಿಯರ ಮುಳ್ಳುಪೊದರುಗಳನ್ನೂ ಬಿಡದೆ ಎಲ್ಲವನ್ನೂ ದಹಿಸಿಬಿಡುವುದು.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


“ಈಜಿಪ್ಟರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೊವಾಬ್ಯರು, ಮುಂದಲೆ ಕೂದಲನ್ನು ಕತ್ತರಿಸಿಕೊಳ್ಳುವ ಅರಣ್ಯವಾಸಿಗಳು, ಅಂತು ದೇಹದಲ್ಲಿ ಮಾತ್ರ ಸುನ್ನತಿಯುಳ್ಳವರು, ಇವರೆಲ್ಲರನ್ನು ದಂಡಿಸುವ ದಿನಗಳು ಬರುತ್ತವೆ.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.


ಅಪರಿಚಿತ ನಾಡಿಗೆ ಅವರನ್ನು ಸಾಗಿಸುವೆನು. ಅಲ್ಲಿ ಶತ್ರುಗಳಿಗೇ ಊಳಿಗದವರನ್ನಾಗಿಸುವೆನು. ಏಕೆಂದರೆ ನನ್ನ ಕೋಪಾಗ್ನಿ ಉರಿಯುತ್ತಿದೆ. ಅದು ನಿಮ್ಮನ್ನು ಸುಟ್ಟುಹಾಕುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು