Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:6 - ಕನ್ನಡ ಸತ್ಯವೇದವು C.L. Bible (BSI)

6 ಸಿಯೋನಿನ ಕಡೆಗೆ ಧ್ವಜವನ್ನೆತ್ತಿರಿ. ತಡಮಾಡದೆ ವಲಸೆಹೋಗಿರಿ. ಸರ್ವೇಶ್ವರ ಉತ್ತರದಿಂದ ವಿಪತ್ತನ್ನೂ ಘೋರ ನಾಶವನ್ನೂ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:6
19 ತಿಳಿವುಗಳ ಹೋಲಿಕೆ  

“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.


“ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.


ಬಾಬಿಲೋನಿನ ಕೋಟೆಗೆ ಎದುರಾಗಿ ಧ್ವಜವೆತ್ತಿರಿ. ಪಹರೆಯನ್ನು ಬಲಪಡಿಸಿರಿ. ಕಾವಲುಗಾರರನ್ನು ನಿಲ್ಲಿಸಿರಿ. ಹೊಂಚುಗಾರರನ್ನು ಗೊತ್ತುಮಾಡಿರಿ!’ ಸರ್ವೇಶ್ವರ ಸ್ವಾಮಿ ಬಾಬಿಲೋನಿನವರ ವಿಷಯದಲ್ಲಿ ನುಡಿದಿದ್ದನ್ನು ನೆನಪಿಗೆ ತಂದುಕೊಂಡು ನೆರವೇರಿಸಿದ್ದಾರೆ.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಮತ್ತೆ ಸರ್ವೇಶ್ವರ ಸ್ವಾಮಿ, “ಇಗೋ, ಉತ್ತರದಿಂದ ಒಂದು ರಾಷ್ಟ್ರ ಬರುತ್ತಿದೆ. ಅದು ಮಹಾ ಬಲಿಷ್ಠ ರಾಷ್ಟ್ರ. ಜಗದ ಕಟ್ಟಕಡೆಯಿಂದ ಹೊರಟುಬರುತ್ತಿದೆ.


ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.


ಎಷ್ಟರವರೆಗೆ ನಾನು ಯುದ್ಧಪತಾಕೆಗಳನ್ನು ನೋಡುತ್ತಿರಲಿ ! ಯುದ್ಧ ಕಹಳೆಗಳು ಮೊಳಗುವುದನ್ನು ಕೇಳುತ್ತಿರಲಿ !


ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.


“ಆ ದಿನದಲ್ಲಿ ಜೆರುಸಲೇಮಿನಲ್ಲಿರುವ ಮೀನುಬಾಗಿಲಿನ ಬಳಿ ಕೂಗಾಟವನ್ನು, ಪಟ್ಟಣದ ಹೊಸ ಬಡಾವಣೆಯಲ್ಲಿ ಗೋಳಾಟವನ್ನು, ಹಾಗೂ ಬೆಟ್ಟಗುಡ್ಡಗಳಲ್ಲಿ ಭೀಕರ ಗದ್ದಲವನ್ನು ಕೇಳುವಿರಿ. ಇದು ಸರ್ವೇಶ್ವರಸ್ವಾಮಿಯ ನುಡಿ.


“ಇಗೋ ಕೇಳಿಬರುತ್ತಿದೆ ಬಾಬಿಲೋನಿನಿಂದ ಕೂಗಾಟ! ಆ ಬಾಬಿಲೋನಿಯರ ದೇಶದಿಂದ ಮಹಾ ವಿನಾಶದ ಕಿರುಚಾಟ!


ಇಗೋ ಯುದ್ಧದ ಆರ್ಭಟ! ಮಹಾವಿನಾಶದ ಕೂಗಾಟ ನಾಡಿನೊಳಗೆಲ್ಲ!


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನಗೆ ವಿರುದ್ಧ ಏರ್ಪಡಿಸುವೆನು. ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಬೆಂಕಿಗೆ ಕಡಿದು ಹಾಕುವರು.


ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳ ರಥ ಅದನ್ನು ಹಿಂಬಾಲಿಸಿ ಪಶ್ಚಿಮಕ್ಕೆ ಹೋಯಿತು. ಮಚ್ಚೆ ಕುದುರೆಗಳ ರಥ ದಕ್ಷಿಣ ದೇಶಕ್ಕೆ ತೆರಳಿತು.


ಇದೋ ಸುದ್ದಿ, ಕೇಳಿಬರುತ್ತಿದೆ ಸುದ್ದಿ ! ದೊಡ್ಡ ಕೋಲಾಹಲವೆದ್ದಿದೆ ಉತ್ತರ ನಾಡಿನಲ್ಲಿ : ‘ಅದನ್ನು ನರಿಗಳ ಬೀಡಾಗಿಸಿರಿ ಜುದೇಯದ ನಗರಗಳನ್ನು ನಾಶಮಾಡಿ.’


ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.


ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು