Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:3 - ಕನ್ನಡ ಸತ್ಯವೇದವು C.L. Bible (BSI)

3 ಆ ಶಾಪ ಈಡೇರುವಂತೆ ಮಾಡಿದ್ದಾನೆ. ನೀವು ಆತನ ವಾಣಿಗೆ ಕಿವಿಗೊಡದೆ ಪಾಪಮಾಡಿದ್ದರಿಂದ ಇದು ನಿಮಗೆ ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಏನೇನು ಮಾಡುವೆನೆಂದು ಯೆಹೋವನು ಹೇಳಿದ್ದನೋ ಅದೆಲ್ಲವನ್ನು ಹೇಳಿದ್ದಂತೆಯೇ ಮಾಡಿದ್ದಾನೆ. ಯೆಹೂದದ ಜನರಾದ ನೀವುಗಳು ಯೆಹೋವನ ವಿರುದ್ಧ ಪಾಪ ಮಾಡಿದ್ದರಿಂದ ಈ ಕೇಡು ಸಂಭವಿಸಿತು. ನೀವು ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:3
12 ತಿಳಿವುಗಳ ಹೋಲಿಕೆ  

ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ನಮ್ಮ ಮೇಲೆ ನೀವೆಷ್ಟೇ ಕೇಡನು ಬರಮಾಡಿದರೂ ನೀವು ನ್ಯಾಯವಂತರು, ಸತ್ಯಸ್ವರೂಪಿ, ನಾವೋ ದುಷ್ಟರು!


ಶಾಂತಿ ಸವಿದದ್ದೇ ದ್ರೋಹಿಗಳಾಗಿ ನಡೆದರು ಮತ್ತೆ ನೀವಿತ್ತಿರವರನು ದೊರೆತನ ನಡೆಸುವ ವೈರಿಗಳ ಕೈಗೆ. ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು, ಆಲಿಸಿದಿರಿ ಪರದಿಂದ ರಕ್ಷಿಸಿದಿರಿ ಪದೇ ಪದೇ ಅಪರಿಮಿತ ಕರುಣೆಯಿಂದ.


ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.


ನೀವು ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳದೆ, ಅವರ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ, ಪಾಪಮಾಡಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದರಿಂದಲೇ ಇಂಥಾ ವಿಪತ್ತು ನಿಮಗೆ ಸಂಭವಿಸಿದೆ.”


“ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ.


ಅನೇಕ ಅನ್ಯಜನಾಂಗದವರು ಈ ನಗರದ ಮಾರ್ಗವಾಗಿ ಹೋಗುತ್ತಾ ಸರ್ವೇಶ್ವರ ಈ ಮಹಾನಗರಕ್ಕೆ ಹೀಗೇಕೆ ಮಾಡಿದರೆಂದು ಮಾತಾಡಿಕೊಳ್ಳುವರು.


ನೀನು ಹೋಗಿ ಸುಡಾನಿನ ಎಬೆದ್ಮೆಲೆಕನಿಗೆ ಹೀಗೆ ತಿಳಿಸು: “ಈ ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ನಾನು ನುಡಿದ ಮೇಲನ್ನು ಅಲ್ಲ, ಕೇಡನ್ನೇ ಈ ನಗರದ ಮೇಲೆ ಬರಮಾಡುವೆನು. ಅದು ನಿನ್ನ ಕಣ್ಣೆದುರಿಗೇ ಆ ದಿನದಂದು ನಡೆಯುವುದು.


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು