ಯೆರೆಮೀಯ 40:9 - ಕನ್ನಡ ಸತ್ಯವೇದವು C.L. Bible (BSI)9 ಇವರಿಗೂ ಇವರ ಜನರಿಗೂ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, “ಬಾಬಿಲೋನಿಯರಿಗೆ ಅಧೀನರಾಗಿರಲು ಹೆದರಬೇಡಿ, ಬಾಬಿಲೋನಿನ ಅರಸನಿಗೆ ಅಧೀನರಾಗಿ ಅಲ್ಲಿಯೇ ವಾಸಮಾಡಿ. ಆಗ ನಿಮಗೆ ಒಳ್ಳೆಯದಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ - ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಆ ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು. “ಸೈನಿಕರೇ, ಬಾಬಿಲೋನಿನ ಜನರ ಸೇವೆಮಾಡಲು ಭಯಪಡಬೇಡಿ. ಈ ಪ್ರದೇಶದಲ್ಲಿ ನೆಲೆಸಿ ಬಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗೆಲ್ಲ ಒಳ್ಳೆಯದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ ‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು. ಅಧ್ಯಾಯವನ್ನು ನೋಡಿ |