ಯೆರೆಮೀಯ 41:1 - ಕನ್ನಡ ಸತ್ಯವೇದವು C.L. Bible (BSI)1 ಏಳನೆಯ ತಿಂಗಳಿನಲ್ಲಿ ಇಷ್ಮಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು. ಈತನು ರಾಜವಂಶದವನು, ಎಲೀಷಾಮನ ಮೊಮ್ಮಗನು, ನೆತನ್ಯನ ಮಗನು ಹಾಗು ಅರಸನ ಪದಾಧಿಕಾರಿಗಳಲ್ಲಿ ಒಬ್ಬನು. ಅಲ್ಲಿ ಗೆದಲ್ಯನೊಂದಿಗೆ ಅವರೆಲ್ಲರು ಊಟಮಾಡುತ್ತಿದ್ದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ವಿುಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ, ಅಧ್ಯಾಯವನ್ನು ನೋಡಿ |
ಬಾಬಿಲೋನಿಯದ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿ ಹಾಗು ಬಾಬಿಲೋನಿಗೆ ಸೆರೆಹೋಗದ ನಾಡಿಗರಲ್ಲಿ ಬಡವರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿ ಹರಡಿತು. ಕಾಡುಮೇಡುಗಳಲ್ಲಿದ್ದ ಎಲ್ಲ ಯಹೂದ್ಯ ಸೈನಿಕರೂ ಸೇನಾಪತಿಗಳೂ ಇದನ್ನು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.