Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:15 - ಕನ್ನಡ ಸತ್ಯವೇದವು C.L. Bible (BSI)

15 ನೆತನ್ಯನ ಮಗ ಇಷ್ಮಾಯೇಲನಾದರೋ ಎಂಟುಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮರೆಹೊಕ್ಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮೊರೆಹೊಕ್ಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮರೆಹೊಕ್ಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೆತನ್ಯನ ಮಗನಾದ ಇಷ್ಮಾಯೇಲನು ಮತ್ತು ಅವನ ಎಂಟು ಜನ ಸಂಗಡಿಗರು ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರ ಮೊರೆಹೊಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಜನರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು, ಅಮ್ಮೋನ್ಯರ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:15
9 ತಿಳಿವುಗಳ ಹೋಲಿಕೆ  

ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದೆ ನಡೆದನು; ಸಿರಿಯಾದವರು ಓಡಿಹೋಗತೊಡಗಿದರು. ಇಸ್ರಯೇಲರು ಅವರನ್ನು ಹಿಂದಟ್ಟಿದರು. ಅರಸ ಬೆನ್ಹದದನು ಹಾಗು ಕೆಲವು ಮಂದಿ ರಾಹುತರು ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.


ದಾವೀದನು ಮರುದಿನ ನಸುಕಿನಲ್ಲೇ ಅವರ ಮೇಲೆ ದಾಳಿಮಾಡಿ ಸೂರ್ಯ ಅಸ್ತವಾಗುವವರೆಗೂ ಅವರನ್ನು ಸದೆಬಡಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಯುವಕರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.


ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.


ನೆತಲ್ಯನ ಮಗ ಇಷ್ಮಾಯೇಲನು ಮತ್ತು ಅವನೊಂದಿಗಿದ್ದ ಹತ್ತು ಜನರು ಎದ್ದು ಅಹೀಕಾಮನ ಮಗ, ಶಾಫಾನನ ಮೊಮ್ಮಗ, ಹಾಗು ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಆ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.


ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತುಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನು, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನು ಹಾಗು ಬಾಬಿಲೋನಿಯಾದವರನ್ನು ಸಂಹರಿಸಿದನು.


ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಜನರೆಲ್ಲರು ಹಿಂದಿರುಗಿಹೋಗಿ ಕಾರೇಹನ ಮಗ ಯೋಹಾನಾನನನ್ನೂ ಸೇರಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು