Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:17 - ಕನ್ನಡ ಸತ್ಯವೇದವು C.L. Bible (BSI)

17 ಬಾಬಿಲೋನಿಯರ ಭಯದಿಂದ ಈಜಿಪ್ಟಿಗೆ ವಲಸೆಹೋಗಬೇಕೆಂದು ಬೆತ್ಲೆಹೇಮಿನ ಸಮೀಪದಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇಮಿನ ಸಮೀಪವಾಗಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇವಿುನ ಸಮೀಪವಾಗಿರುವ ಗೇರುಥ್ ಕಿಮ್ಹಾವಿುನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17-18 ಯೋಹಾನಾನನೂ ಉಳಿದ ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿದರು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು. ಆದರೆ ಇಷ್ಮಾಯೇಲನು ಗೆದಲ್ಯನನ್ನು ಕೊಲೆ ಮಾಡಿದನು. ಇದರಿಂದ ಕಸ್ದೀಯರಿಗೆ ಕೋಪ ಬರಬಹುದೆಂದು ಯೋಹಾನಾನನು ಭಯಪಟ್ಟನು. ಆದ್ದರಿಂದ ಈಜಿಪ್ಟಿಗೆ ಓಡಿಹೋಗಬೇಕೆಂದು ಅವರು ನಿರ್ಧರಿಸಿದರು. ಈಜಿಪ್ಟಿಗೆ ಹೋಗುವ ದಾರಿಯಲ್ಲಿ ಅವರು ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು. ಗೇರುಥ್ ಕಿಮ್ಹಾಮು ಬೆತ್ಲೆಹೇಮ್ ಪಟ್ಟಣದ ಸಮೀಪದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈಜಿಪ್ಟಿಗೆ ಹೋಗುವುದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:17
6 ತಿಳಿವುಗಳ ಹೋಲಿಕೆ  

ನಾವು ಈಜಿಪ್ಟಿನಲ್ಲೇ ವಾಸಮಾಡುತ್ತೇವೆ. ಅದು ಯುದ್ಧ ಕಾಣದ, ರಣಕಹಳೆ ಕೇಳದ, ಕೂಳಿನ ಕೊರತೆಯಿಲ್ಲದ ದೇಶ.’ ಎಂದುಕೊಳ್ಳಬೇಡಿ.


ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ.


“ಯೆಹೂದ್ಯರಲ್ಲಿ ಅಳಿದುಳಿದವರೇ, ಸರ್ವೇಶ್ವರ ನಿಮಗೆ ‘ಈಜಿಪ್ಟಿಗೆ ಹೋಗಬೇಡಿ’ ಎಂದು ಆಜ್ಞೆಮಾಡಿದ್ದಾರೆ. ನಾನು ಆ ಮಾತನ್ನು ಇಂದೇ ನಿಮಗೆ ಪ್ರಕಟಿಸಿದ್ದೇನೆ. ಇದು ನಿಮಗೆ ಚೆನ್ನಾಗಿ ತಿಳಿದಿರಲಿ.


ಆಗ ರಕ್ಷಾದಳದ ನಾಯಕನಾದ ನೆಬೂಜರದಾನನನ್ನು, ಅಹೀಕಾಮನ ಮಗ ಹಾಗು ಶಾಫಾನನ ಮೊಮ್ಮಗ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ್ದ ಜನರನ್ನು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಜುದೇಯದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಅಳಿದುಳಿದ ಯೆಹೂದಜನರನ್ನು, ಪ್ರವಾದಿ ಯೆರೆಮೀಯನನ್ನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು