Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:18 - ಕನ್ನಡ ಸತ್ಯವೇದವು C.L. Bible (BSI)

18 ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಬಾಬಿಲೋನಿಯರಿಗೆ ಆ ಜನರು ಅಂಜಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇಮಿಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇವಿುಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:18
11 ತಿಳಿವುಗಳ ಹೋಲಿಕೆ  

ಯೆರೆಮೀಯನು ಉತ್ತರಕೊಡದೆ ಇರಲು ನೆಬೂಜರದಾನನು ಅವನಿಗೆ, “ಬಾಬಿಲೋನಿಯದ ಅರಸನು, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಜುದೇಯದ ನಗರಗಳಿಗೆ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆ. ಅವನ ಬಳಿಗೆ ಹೋಗು, ಅವನ ಹತ್ತಿರ ಜನರ ನಡುವೆ ವಾಸಮಾಡುವ ಇಲ್ಲವೆ ಎಲ್ಲಿಗೆ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳಿಸಿಬಿಟ್ಟನು.


ನೀವು ಹೆದರುತ್ತಿರುವ ಖಡ್ಗ, ಈಜಿಪ್ಟಿನಲ್ಲೂ ನಿಮ್ಮನ್ನು ಹಿಂದಟ್ಟಿ ಬಂದು ಹಿಡಿಯುವುದು. ನೀವು ಅಂಜುತ್ತಿರುವ ಕ್ಷಾಮ ಅಲ್ಲಿಯೂ ನಿಮ್ಮ ಬೆನ್ನು ಹತ್ತುವುದು. ನೀವು ಅಲ್ಲೇ ಸಾಯುವಿರಿ.


ಬಾಬಿಲೋನಿಯದ ಅರಸನಿಗೆ ಹೆದರಬೇಡಿ, ಬೆದರಬೇಡಿ. ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಾನೇ ನಿಮ್ಮೊಂದಿಗೆ ಇರುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತುಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನು, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನು ಹಾಗು ಬಾಬಿಲೋನಿಯಾದವರನ್ನು ಸಂಹರಿಸಿದನು.


ಇದಾದ ಬಳಿಕ ಎಲ್ಲ ಸೇನಾಪತಿಗಳು, ಕಾರೇಹನ ಮಗ ಯೋಹಾನಾನನು, ರೋಷಾಯನ ಮಗ ಯೆಜನ್ಯನು, ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರು ಪ್ರವಾದಿ ಯೆರೆಮೀಯನ ಬಳಿಗೆ ಬಂದರು.


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ತಾನು ಜುದೇಯ ದೇಶದಲ್ಲಿ ಉಳಿಸಿದ ಜನರ ಮೇಲೆ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು