ಯೆರೆಮೀಯ 41:8 - ಕನ್ನಡ ಸತ್ಯವೇದವು C.L. Bible (BSI)8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡಿ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ ಇವುಗಳನ್ನು ಕಾಡಿನಲ್ಲಿ ರಾಶಿಯಾಗಿ ಬಚ್ಚಿಟ್ಟಿದ್ದೇವೆ,” ಎಂದು ಬಿನ್ನವಿಸಿದರು. ಈ ಕಾರಣ ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ - ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಉಳಿದ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ, ನಮ್ಮಲ್ಲಿ ಗೋಧಿ, ಜವೆಗೋಧಿ, ಎಣ್ಣೆ ಮತ್ತು ಜೇನುತುಪ್ಪ ಇವೆ. ನಾವು ಆ ವಸ್ತುಗಳನ್ನು ಒಂದು ಹೊಲದಲ್ಲಿ ಬಚ್ಚಿಟ್ಟಿದ್ದೇವೆ” ಎಂದು ಹೇಳಿದರು. ಆದ್ದರಿಂದ ಇಷ್ಮಾಯೇಲನು ಆ ಹತ್ತು ಮಂದಿಯನ್ನು ಬಿಟ್ಟುಬಿಟ್ಟನು. ಅವನು ಬೇರೆಯವರೊಂದಿಗೆ ಅವರನ್ನು ಕೊಲ್ಲಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ. ಅಧ್ಯಾಯವನ್ನು ನೋಡಿ |