Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:16 - ಕನ್ನಡ ಸತ್ಯವೇದವು C.L. Bible (BSI)

16 ನೀವು ಹೆದರುತ್ತಿರುವ ಖಡ್ಗ, ಈಜಿಪ್ಟಿನಲ್ಲೂ ನಿಮ್ಮನ್ನು ಹಿಂದಟ್ಟಿ ಬಂದು ಹಿಡಿಯುವುದು. ನೀವು ಅಂಜುತ್ತಿರುವ ಕ್ಷಾಮ ಅಲ್ಲಿಯೂ ನಿಮ್ಮ ಬೆನ್ನು ಹತ್ತುವುದು. ನೀವು ಅಲ್ಲೇ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನು ಹತ್ತುವದು; ಅಲ್ಲೇ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನ್ನು ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಬಗ್ಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಬಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ಭಯಪಡುವ ಖಡ್ಗವು ಈಜಿಪ್ಟ್ ದೇಶದಲ್ಲಿ ನಿಮ್ಮನ್ನು ಹಿಡಿಯುವುದು. ನೀವು ಹೆದರಿಕೊಳ್ಳುವ ಕ್ಷಾಮವು ಈಜಿಪ್ಟ್ ದೇಶಕ್ಕೆ ನಿಮ್ಮನ್ನು ಹಿಂದಟ್ಟುವುದು, ನೀವು ಅಲ್ಲೇ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:16
13 ತಿಳಿವುಗಳ ಹೋಲಿಕೆ  

ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.


ಇಗೋ, ನಿಮಗೆ ಒಳಿತನ್ನು ಅಲ್ಲ, ಕೇಡನ್ನು ಬರಮಾಡಬೇಕೆಂದು ನಿಮ್ಮ ವಿಷಯದಲ್ಲಿ ಎಚ್ಚರಗೊಂಡಿದ್ದೇನೆ. ಈಜಿಪ್ಟಿನ ಎಲ್ಲ ಯೆಹೂದ್ಯರು ಖಡ್ಗ-ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ಇವನನ್ನು ಹೀಗೆಯೇ ಬಿಟ್ಟರೆ ಜನರೆಲ್ಲರೂ ಇವನನ್ನೇ ನಂಬುವರು, ರೋಮನರು ಬಂದು ನಮ್ಮ ಪವಿತ್ರ ದೇವಾಲಯವನ್ನೂ ರಾಷ್ಟ್ರವನ್ನೂ ನೆಲಸಮಮಾಡುವರು,” ಎಂದು ವಾದಿಸಿದರು.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡದೆ ‘ನಾವು ಈ ನಾಡಿನಲ್ಲಿ ನೆಲೆಸುವುದೇ ಇಲ್ಲ, ಇದು ನಮಗೆ ಬೇಡವೇಬೇಡ.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು; ಮಂಗಳವು ಸತ್ಪುರುಷರಿಗೆ ಸಿಗುವ ಪ್ರತಿಫಲವು.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ ಅವರು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ, ನಿಮ್ಮನ್ನು ಹಿಂದಟ್ಟಿ ಹಿಡಿದು, ಕಡೆಗೆ ನಾಶಮಾಡುವುವು.


ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರ ಇವುಗಳಿಂದಲೂ, ನಾಡನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ಪೀಡಿಸುವರು. ನೀವು ಸಾಯುವ ತನಕ ಈ ಪೀಡೆಗಳು ನಿಮ್ಮನ್ನು ಬೆನ್ನತ್ತುವುವು.


“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ, ಈ ಕೆಳಕಂಡ ಅಶುಭಗಳು ನಿಮಗೆ ಪ್ರಾಪ್ತವಾಗುವುವು:


“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಬಾಬಿಲೋನಿಯರಿಗೆ ಆ ಜನರು ಅಂಜಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು