ಯೆರೆಮೀಯ 42:17 - ಕನ್ನಡ ಸತ್ಯವೇದವು C.L. Bible (BSI)17 ಈಜಿಪ್ಟಿಗೆ ಹೋಗಿ ಅಲ್ಲೆ ವಾಸಿಸಲು ಹಟಹಿಡಿಯುವ ಎಲ್ಲ ಜನರಿಗೂ ಇದೇ ಗತಿಯಾಗುವುದು. ಖಡ್ಗ-ಕ್ಷಾಮ-ವ್ಯಾಧಿಯಿಂದ ಅವರು ಸಾಯುವರು. ನಾನು ಬರಮಾಡುವ ವಿಪತ್ತಿನಿಂದ ಅವರಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು’.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವದು; ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವರು; ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈಜಿಪ್ಟಿಗೆ ಹೋಗಿ ಅಲ್ಲಿ ನೆಲೆಸಬೇಕೆಂದು ನಿಶ್ಚಯಿಸಿದವರೆಲ್ಲರೂ ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಈಜಿಪ್ಟಿಗೆ ಹೋದವರಲ್ಲಿ ಒಬ್ಬನೂ ಬದುಕಿರಲಾರ. ನಾನು ಅವರಿಗೆ ಉಂಟುಮಾಡುವ ಪೀಡೆಯಿಂದ ಒಬ್ಬನೂ ತಪ್ಪಿಸಿಕೊಳ್ಳಲಾರ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈಜಿಪ್ಟಿಗೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನಿಡುವ ಮನುಷ್ಯರಿಗೆಲ್ಲಾ ಹೀಗಾಗುವುದು. ಅವರು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವರು. ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವುದಿಲ್ಲ.’ ಅಧ್ಯಾಯವನ್ನು ನೋಡಿ |