Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:18 - ಕನ್ನಡ ಸತ್ಯವೇದವು C.L. Bible (BSI)

18 “ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನನ್ನ ಉಗ್ರರೋಷಾಗ್ನಿಯು ಯೆರೂಸಲೇವಿುನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವದು; ನೀವು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:18
38 ತಿಳಿವುಗಳ ಹೋಲಿಕೆ  

“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


ಈಜಿಪ್ಟಿಗೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಆ ಜುದೇಯದ ಅಳಿದುಳಿದ ಜನರನ್ನು ನಾಶಮಾಡುವೆನು. ಈಜಿಪ್ಟಿನಲ್ಲೆ ಅವರು ಮಣ್ಣುಪಾಲಾಗುವರು. ಖಡ್ಗ-ಕ್ಷಾಮಗಳಿಂದ ಅಳಿದುಹೋಗುವರು. ಚಿಕ್ಕವರು-ದೊಡ್ಡವರು ಎನ್ನದೆ ಖಡ್ಗ-ಕ್ಷಾಮಗಳಿಗೆ ತುತ್ತಾಗಿ, ಅಪವಾದ, ಅಪಹಾಸ್ಯಗಳಿಗೂ ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವರು.


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಹಿಂದಿರುಗಬೇಕೆಂದು ಹಂಬಲಿಸಿದರೂ ತಾಯ್ನಾಡಿಗೆ ಹಿಂದಿರುಗುವುದೇ ಇಲ್ಲ.”


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”


ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.


ಬೆಳ್ಳಿ ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗಿಬಿಡುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದ ನಾನು ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”


ಸುರಿಸಿದ್ದಾನೆ ಸರ್ವೇಶ್ವರ ತನ್ನ ರೋಷಾಗ್ನಿಯನ್ನು ತೀರಿಸಿಕೊಂಡಿದ್ದಾನೆ ತನ್ನ ಉಗ್ರಕೋಪವನ್ನು. ಆತ ಹೊತ್ತಿಸಿದ ಬೆಂಕಿಗೆ ಸಿಯೋನಿನ ಅಸ್ತಿವಾರ ಆಹುತಿಯಾಗಿದೆ.


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.


ಅವಳು ದೋಷಿಯಾಗಿ ಗಂಡನಿಗೆ ದ್ರೋಹವೆಸಗಿದ್ದರೆ ಕುಡಿದ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವುದು. ಈ ಕಾರಣ ಅವಳ ಹೊಟ್ಟೆ ಉಬ್ಬುವುದು. ಅವಳ ಜನನೇಂದ್ರಿಯಗಳು ಬತ್ತಿಹೋಗುವುವು. ಆಕೆ ತನ್ನ ಜನರ ಮಧ್ಯೆ ಶಾಪಗ್ರಸ್ತಳಾಗುವಳು.


ಆದರೆ ಫರೋಹನ ಆಶ್ರಯದಿಂದ ಅವರಿಗೆ ನಾಚಿಕೆಯಾಗುವುದು. ಈಜಿಪ್ಟಿನವರನ್ನು ಮರೆಹೋಗುವುದರಿಂದ ಅವರಿಗೆ ಅವಮಾನ ಉಂಟಾಗುವುದು.


ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”


ಈ ಊರಿನವರು ಬಾಬಿಲೋನಿಯರ ವಿರುದ್ಧ ಕದನಕ್ಕೆ ಹೊರಟರೆ ಏನು ಪ್ರಯೋಜನ? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರಷ್ಟೆ. ಇವರ ಅಧರ್ಮದ ನಿಮಿತ್ತ ಈ ನಗರಕ್ಕೆ ವಿಮುಖವಾಗಿ, ಕಡುಕೋಪಾವೇಶನಾಗಿ ನಾನೇ ಇವರನ್ನು ಸದೆಬಡಿಯುವೆನು.


ಆದಕಾರಣ, ನನ್ನ ರೌದ್ರಕೋಪಾಗ್ನಿ ಸುರಿದು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಧಗಧಗಿಸಿತು. ಅವು ಈಗಲೂ ಹಾಳುಪಾಳಾಗಿವೆ.’


ಪ್ರವಾಸಿಗಳಾಗಿ ನೀವು ಬಂದಿರುವ ಈಜಿಪ್ಟಿನಲ್ಲಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುತ್ತಿದ್ದೀರಿ. ಆದ್ದರಿಂದ ನೀವೂ ನಿರ್ಮೂಲರಾಗಿ ಎಲ್ಲ ಭೂರಾಜ್ಯಗಳ ಶಾಪ, ನಿಂದೆ, ದೂಷಣೆಗಳಿಗೆ ಗುರಿಯಾಗುವಿರಿ.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಹರಿಸುತ್ತಾ, ನಿಮ್ಮನ್ನು ಜನಾಂಗಗಳಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಒಂದುಗೂಡಿಸಿ,


ತನ್ನ ಗರ್ಭಗುಡಿಯನ್ನೂ ಉತ್ಸವಸ್ಥಾನವನ್ನೂ ಹಾಳುಮಾಡಿದ ತೋಟದ ಗುಡಿಸಲನ್ನೋ ಎಂಬಂತೆ. ಮಹೋತ್ಸವಗಳನ್ನೂ ಸಬ್ಬತ್‍ದಿನಗಳನ್ನೂ ಅಳಿಸಿಬಿಟ್ಟ ನೆನಪಿಗೂ ಬಾರದಂತೆ. ರಾಜರನ್ನೂ ಯಾಜಕರನ್ನೂ ಸರ್ವೇಶ್ವರ ಧಿಕ್ಕರಿಸಿದ ಅತಿ ರೋಷಾವೇಷಗೊಂಡವನಂತೆ.


ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು