Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:19 - ಕನ್ನಡ ಸತ್ಯವೇದವು C.L. Bible (BSI)

19 “ಯೆಹೂದ್ಯರಲ್ಲಿ ಅಳಿದುಳಿದವರೇ, ಸರ್ವೇಶ್ವರ ನಿಮಗೆ ‘ಈಜಿಪ್ಟಿಗೆ ಹೋಗಬೇಡಿ’ ಎಂದು ಆಜ್ಞೆಮಾಡಿದ್ದಾರೆ. ನಾನು ಆ ಮಾತನ್ನು ಇಂದೇ ನಿಮಗೆ ಪ್ರಕಟಿಸಿದ್ದೇನೆ. ಇದು ನಿಮಗೆ ಚೆನ್ನಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು - ಐಗುಪ್ತಕ್ಕೆ ಹೋಗಬೇಡಿರಿ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿವಸ [ಆ ಮಾತನ್ನು] ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಯೆಹೂದ್ಯರಲ್ಲಿ ಅಳಿದುಳಿದವರೇ, ಯೆಹೋವನು ನಿಮಗೆ, ‘ಈಜಿಪ್ಟಿಗೆ ಹೋಗಬೇಡಿರಿ.’ ಎಂದು ಹೇಳಿದ್ದಾನೆ, ನಾನು ಈಗಲೇ ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಯೆಹೂದದ ಶೇಷವೇ, ಯೆಹೋವ ದೇವರು ನಿಮ್ಮ ವಿಷಯವಾಗಿ ಹೇಳಿದ್ದೇನೆಂದರೆ: ‘ಈಜಿಪ್ಟಿಗೆ ಹೋಗಬೇಡಿರಿ,’ ಇದನ್ನು ಖಚಿತಪಡಿಸಿಕೊಳ್ಳಿ: ನಾನು ಇಂದು ನಿಮಗೆ ಎಚ್ಚರಿಕೆ ನೀಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:19
17 ತಿಳಿವುಗಳ ಹೋಲಿಕೆ  

“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


ಆದರೆ ಅವನು ಬಾಬಿಲೋನಿನ ಅರಸನ ವಿರುದ್ಧ ದಂಗೆಯೆದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಈಜಿಪ್ಟಿಗೆ ರಾಯಭಾರಿಗಳನ್ನು ಕಳುಹಿಸಿದ. ಆದರೂ ಇವನು ಗೆಲ್ಲುವನೇ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೇ? ಒಪ್ಪಂದವನ್ನು ಮೀರಿದವನು ತಪ್ಪಿಸಿಕೊಂಡಾನೇ?


ನೀನು ಆ ಸಜ್ಜನನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”


ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು.


ತಾವು ಶತ್ರುವನ್ನು ಮರೆಹೋಗೆನು ಎನ್ನುವುದಾದರೆ ಸರ್ವೇಶ್ವರ ತಮ್ಮ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾರೆ.


ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು.


ಅದಕ್ಕೆ ಪಹರೆಯವನು, “ಹಗಲು ಬರುತ್ತಿದೆ ಮತ್ತೆ ರಾತ್ರಿಯೂ ಬರುತ್ತದೆ. ಬೇಕಾದರೆ ಆಮೇಲೆ ಬಂದು ವಿಚಾರಿಸಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು