Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:21 - ಕನ್ನಡ ಸತ್ಯವೇದವು C.L. Bible (BSI)

21 ನಾನು ಸರ್ವೇಶ್ವರನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರ ನನ್ನ ಮುಖಾಂತರ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನು ಕೇಳುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಯೆಹೋವನ ಅಪ್ಪಣೆಯನ್ನು ಈ ದಿವಸ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಂದು, ನಾನು ನಿಮಗೆ ಯೆಹೋವನ ಸಂದೇಶವನ್ನು ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ. ನನ್ನ ಮೂಲಕ ಆತನು ನಿಮಗೆ ಹೇಳಿದ ಯಾವ ಮಾತನ್ನೂ ನೀವು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಶಬ್ದವನ್ನಾದರೂ ಅವರು ಯಾವುದರ ವಿಷಯವಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೋ ಅದರಲ್ಲಿ ಯಾವುದನ್ನಾದರೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:21
16 ತಿಳಿವುಗಳ ಹೋಲಿಕೆ  

ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


ನಿಮಗೆ ಹಿತಕರವಾದುದೆಲ್ಲವನ್ನು ಬಹಿರಂಗದಲ್ಲೂ ಮನೆಗಳಲ್ಲೂ ಹಿಂಜರಿಯದೆ ಬೋಧಿಸಿದ್ದೇನೆ ಹಾಗೂ ಕಲಿಸಿದ್ದೇನೆ.


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.


ಯೆರೆಮೀಯನು ಜನರೆಲ್ಲರನ್ನು ಸಂಬೋಧಿಸಿ ದೇವರಾದ ಸರ್ವೇಶ್ವರ ತನ್ನ ಮುಖಾಂತರ ಅವರಿಗೆ ಹೇಳಿಕಳುಹಿಸಿದ ಮಾತುಗಳನ್ನೆಲ್ಲ ತಿಳಿಸಿದನು.


ಹೀಗೆ ಜುದೇಯ ನಾಡಿನಲ್ಲೇ ವಾಸಮಾಡಿರೆಂಬ ಸರ್ವೇಶ್ವರನ ಮಾತನ್ನು ಕಾರೇಹನ ಮಗ ಯೋಹಾನಾನನು, ಸಮಸ್ತ ಸೇನಾಪತಿಗಳು, ಹಾಗು ಸಕಲ ಜನರು ಕೇಳದೆಹೋದರು.


“ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.


ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು