ಯೆರೆಮೀಯ 42:3 - ಕನ್ನಡ ಸತ್ಯವೇದವು C.L. Bible (BSI)3 ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಾವು ನಡೆಯಬೇಕಾದ ಮಾರ್ಗವನ್ನೂ ಕೈಗೊಳ್ಳಬೇಕಾದ ಕಾರ್ಯವನ್ನೂ ತೋರಿಸುವಂತೆ ನಮಗಾಗಿ ಪ್ರಾರ್ಥಿಸಬೇಕು. ಅಳಿದುಳಿದಿರುವ ಈ ಎಲ್ಲ ಜನರಿಗಾಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪ್ರಾರ್ಥಿಸಬೇಕು. ನಿಮ್ಮ ಕಣ್ಣಿಗೆ ಕಾಣುವಂತೆ ಹೇರಳವಾದ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ,” ಎಂದು ವಿಜ್ಞಾಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ, ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ವಿಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ, ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ ಎಂದು ವಿಜ್ಞಾಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆರೆಮೀಯನೇ, ನಾವು ಎಲ್ಲಿಗೆ ಹೋಗಬೇಕು, ಏನು ಮಾಡಬೇಕು ಎಂಬುದನ್ನು ಹೇಳಬೇಕೆಂದು ನಿನ್ನ ದೇವರನ್ನು ಪ್ರಾರ್ಥಿಸು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾವು ನಡೆಯತಕ್ಕ ಮಾರ್ಗವನ್ನೂ, ನಾವು ಮಾಡತಕ್ಕ ಕಾರ್ಯವನ್ನೂ ನಿನ್ನ ದೇವರಾದ ಯೆಹೋವ ದೇವರು ನಮಗೆ ತಿಳಿಸುವ ಹಾಗೆ, ನಿನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆ ಮಾಡು,” ಎಂದರು. ಅಧ್ಯಾಯವನ್ನು ನೋಡಿ |