Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:6 - ಕನ್ನಡ ಸತ್ಯವೇದವು C.L. Bible (BSI)

6 ನಮ್ಮ ದೇವರಾದ ಸರ್ವೇಶ್ವರನ ಮಾತು ಹಿತವಾಗಿರಲಿ, ಅಹಿತವಾಗಿರಲಿ ಅದನ್ನು ಕೈಗೊಳ್ಳುತ್ತೇವೆ. ಅವರ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ನಾವು ಕಳುಹಿಸಿದ್ದೇವೆ. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಿದರೆ ನಮಗೇ ಶುಭವಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವದಷ್ಟೆ ಎಂಬದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನ ಸಂದೇಶವು ನಮಗೆ ಇಷ್ಟವಾಗಲಿ ಅಥವಾ ಇಷ್ಟವಾಗದಿರಲಿ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ. ಯೆಹೋವನ ಸಂದೇಶಕ್ಕಾಗಿ ನಾವು ನಿನ್ನನ್ನು ಆತನಲ್ಲಿಗೆ ಕಳುಹಿಸುತ್ತಿದ್ದೇವೆ. ಆತನು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಆಗ ನಮಗೆ ಒಳ್ಳೆಯದಾಗುತ್ತದೆ. ಹೌದು, ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾವು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ, ಆ ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಅದು ಹಿತವಾದರೂ ಸರಿಯೇ, ಅಹಿತವಾದರೂ ಸರಿಯೇ ಕೇಳುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:6
16 ತಿಳಿವುಗಳ ಹೋಲಿಕೆ  

ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ಹಾಗಾದರೆ ಹಿತಕರವಾದದ್ದೇ ನನಗೆ ಮೃತ್ಯುಕಾರಕವಾಯಿತೇ? ಇಲ್ಲವೇ ಇಲ್ಲ! ಹಾಗೆ ಮೃತ್ಯುಕಾರಕವಾದುದು ಪಾಪವೇ. ತನ್ನ ನಿಜಸ್ವರೂಪವನ್ನು ತೋರಿಸುವುದಕ್ಕಾಗಿ ಪಾಪವು ನನಗೆ ಹಿತಕರವಾದುದನ್ನು ಉಪಯೋಗಿಸಿಕೊಂಡು ನನಗೆ ಮರಣವನ್ನು ತಂದಿತು. ಹೀಗೆ ಪಾಪವು ಅದೆಷ್ಟು ಭೀಕರವಾದುದೆಂದು ಆಜ್ಞೆಯ ಮೂಲಕ ವ್ಯಕ್ತವಾಗುತ್ತದೆ.


ಹಾಗಾದರೆ ಧರ್ಮಶಾಸ್ತ್ರವೇ ಪಾಪ ಎಂದು ಹೇಳೋಣವೆ? ಖಂಡಿತವಾಗಿ ಇಲ್ಲ. ಧರ್ಮಶಾಸ್ತ್ರ ಇಲ್ಲದಿದ್ದರೆ ಪಾಪದ ಅರಿವು ನನಗಾಗುತ್ತಿರಲಿಲ್ಲ. ‘ದುರಾಶೆಪಡಬೇಡ’ ಎಂದು ಧರ್ಮಶಾಸ್ತ್ರ ವಿಧಿಸದೆಹೋಗಿದ್ದರೆ ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ.


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II


ಅದಕ್ಕೆ ಜನರು, “ನಮ್ಮ ದೇವರಾದ ಸರ್ವೇಶ್ವರನಿಗೇ ಸೇವೆಸಲ್ಲಿಸುತ್ತೇವೆ. ಅವರ ಮಾತನ್ನೇ ಕೇಳುತ್ತೇವೆ,” ಎಂದರು.


ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ,” ಎಂದರು.


ನೀನೇ ಹತ್ತಿರಕ್ಕೆ ಹೋಗಿ, ನಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ಅದರಂತೆ ನಡೆಯುತ್ತೇವೆ’ ಎಂದು ಹೇಳಿದಿರಿ.


ದೇವದಾರಿನ ಕೆಲಸದಲ್ಲಿ, ಬೇರೆಯವರನ್ನು ಮೀರಿಸುವುದರಲ್ಲಿ ಅಡಗಿದೆಯೇ ನಿನ್ನ ದೊರೆತನದ ಹಿರಿಮೆ? ನಿನ್ನ ತಂದೆ ಎಷ್ಟೇ ಕುಡಿದರೂ ತಿಂದರೂ ನ್ಯಾಯನೀತಿಯನ್ನು ಪಾಲಿಸುತ್ತಿದ್ದನಲ್ಲವೆ? ಆಗ ಅವನಿಗೆ ಎಲ್ಲವು ನೆಮ್ಮದಿಯಾಗಿತ್ತಲ್ಲವೆ?


ಹೀಗೆ ಜುದೇಯ ನಾಡಿನಲ್ಲೇ ವಾಸಮಾಡಿರೆಂಬ ಸರ್ವೇಶ್ವರನ ಮಾತನ್ನು ಕಾರೇಹನ ಮಗ ಯೋಹಾನಾನನು, ಸಮಸ್ತ ಸೇನಾಪತಿಗಳು, ಹಾಗು ಸಕಲ ಜನರು ಕೇಳದೆಹೋದರು.


ಆದರೆ ಅವರ ನಾಲಿಗೆಯಾಡಿತು ಅಸತ್ಯ I ಅವರ ಬಾಯಿ ಮಾಡಿತು ಕೇವಲ ಮುಖಸ್ತುತಿಯ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು