Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:1 - ಕನ್ನಡ ಸತ್ಯವೇದವು C.L. Bible (BSI)

1 ಯೆರೆಮೀಯನು ಜನರೆಲ್ಲರನ್ನು ಸಂಬೋಧಿಸಿ ದೇವರಾದ ಸರ್ವೇಶ್ವರ ತನ್ನ ಮುಖಾಂತರ ಅವರಿಗೆ ಹೇಳಿಕಳುಹಿಸಿದ ಮಾತುಗಳನ್ನೆಲ್ಲ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿ ಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿಬಿಟ್ಟ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆರೆಮೀಯನು ದೇವರಾದ ಯೆಹೋವನ ಸಂದೇಶವನ್ನು ಜನರಿಗೆ ಹೇಳಿ ಮುಗಿಸಿದನು. ಯೆಹೋವನು ತನ್ನ ಮೂಲಕ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲ ಯೆರೆಮೀಯನು ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆರೆಮೀಯನು ಜನರೆಲ್ಲರಿಗೆ ಅವರ ದೇವರಾದ ಯೆಹೋವ ದೇವರು ಯಾವ ವಿಷಯವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದರೋ, ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:1
15 ತಿಳಿವುಗಳ ಹೋಲಿಕೆ  

ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು.


ಈ ಸುರುಳಿಯನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ ಯೂಫ್ರೆಟಿಸ್ ನದಿಯ ಮಧ್ಯೆ ಎಸೆದುಬಿಡು.


ನೀವು ಯಾವ ನಾಡಿನಲ್ಲಿ ವಾಸಮಾಡಲು ಬಯಸಿ ಹೋಗುತ್ತೀರೋ ಆ ನಾಡಿನಲ್ಲಿ ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವಿರಿ. ಇದು ನಿಶ್ಚಯ ಎಂದು ತಿಳಿಯಿರಿ,” ಎಂದನು.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


“ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಆಗ ಸರ್ವೇಶ್ವರ ನನಗೆ, “ನಾನೊಬ್ಬ ತರುಣ ಎನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇಬೇಕು; ನಾನು ಆಜ್ಞಾಪಿಸುವುದನ್ನೆಲ್ಲ ನುಡಿಯಲೇ ಬೇಕು.


ಸಮುವೇಲನು ಅರಸಬೇಕೆಂದು ಕೋರಿದ ಜನರಿಗೆ,


ಮೋಶೆ ಜನರ ಬಳಿಗೆ ಬಂದು ಸರ್ವೇಶ್ವರನ ಎಲ್ಲ ಆಜ್ಞೆಗಳನ್ನೂ, ವಿಧಿವಿಧಾನಗಳನ್ನೂ ವಿವರಿಸಿದನು. ಜನರೆಲ್ಲರು, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ” ಎಂದು ಒಕ್ಕೊರಳಿನಿಂದ ಉತ್ತರ ಕೊಟ್ಟರು.


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.


ನಾನು ಸರ್ವೇಶ್ವರನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರ ನನ್ನ ಮುಖಾಂತರ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನು ಕೇಳುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು