ಯೆರೆಮೀಯ 43:10 - ಕನ್ನಡ ಸತ್ಯವೇದವು C.L. Bible (BSI)10 ‘ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿ: ನಾನು ಬಾಬಿಲೋನಿನ ಅರಸನು ಹಾಗು ನನ್ನ ಸೇವಕನು ಆದ ನೆಬೂಕದ್ನೆಚ್ಚರನನ್ನು ನಾನು ಕರೆಯಿಸುವೆನು. ನಾನು ಮರೆಮಾಡಿಟ್ಟಿರುವ ಈ ಕಲ್ಲುಗಳ ಮೇಲೆಯೆ ಅವನು ತನ್ನ ಸಿಂಹಾಸನವನ್ನು ಹಾಕಿಸುವನು. ಈ ಕಲ್ಲುಗಳ ಮೇಲೆಯೆ ತನ್ನ ರತ್ನಗಂಬಳಿಯನ್ನು ಹಾಸಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ‘ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು. ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು. ಅಧ್ಯಾಯವನ್ನು ನೋಡಿ |