Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:13 - ಕನ್ನಡ ಸತ್ಯವೇದವು C.L. Bible (BSI)

13 ಬಳಿಕ ಹಾಯಾಗಿ ಅಲ್ಲಿಂದ ಹೊರಟುಹೋಗುವನು. ಅವನು ಈಜಿಪ್ಟ್ ದೇಶದಲ್ಲಿರುವ ಸೂರ್ಯ ದೇವಾಲಯದ ಸ್ತಂಭಗಳನ್ನು ಒಡೆದುಹಾಕುವನು, ಅಲ್ಲಿನ ದೇವತೆಗಳ ಆಲಯಗಳನ್ನು ಸುಟ್ಟುಹಾಕುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಐಗುಪ್ತದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೆಬೂಕದ್ನೆಚ್ಚರನು ಈಜಿಪ್ಟಿನ ಸೂರ್ಯ ದೇವಾಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ನಾಶಪಡಿಸುವನು. ಅವನು ಈಜಿಪ್ಟಿನ ಸುಳ್ಳುದೇವರುಗಳ ಆಲಯಗಳನ್ನು ಸುಟ್ಟುಹಾಕುವನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಈಜಿಪ್ಟಿನ ದೇಶದಲ್ಲಿರುವ ಸೂರ್ಯ ದೇವಾಲಯವನ್ನು ಒಡೆದುಹಾಕಿ, ಈಜಿಪ್ಟ್ ದೇವರುಗಳ ಆಲಯಗಳನ್ನು ಬೆಂಕಿಯಿಂದ ಸುಡುವನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:13
13 ತಿಳಿವುಗಳ ಹೋಲಿಕೆ  

ಆ ದಿನದಂದು ಈಜಿಪ್ಟಿನ ನಾಡಿನಲ್ಲಿ ಐದು ಪಟ್ಟಣಗಳಲ್ಲಿ ಕಾನಾನಿನ (ಹಿಬ್ರು) ಭಾಷೆಯನ್ನಾಡುವ ಜನರು ತುಂಬಿರುವರು. ಅವರು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಶರಣರೆಂದು ಪ್ರಮಾಣ ಮಾಡುವರು. ಆ ಪಟ್ಟಣಗಳಲ್ಲಿ ಒಂದಕ್ಕೆ “ರವಿಪುರ” ಎಂಬ ಹೆಸರಿರುವುದು.


ಬಳಿಕ ಫರೋಹನು ಜೋಸೆಫನಿಗೆ ‘ಸಾಪ್ನತ್ಪನ್ನೇಹ’ ಎಂಬ ಹೊಸ ಹೆಸರಿಟ್ಟನು; ಓನ್ ಎಂಬ ಗುರುಪೀಠದ ಆಚಾರ್ಯನಾಗಿದ್ದ ಪೋಟೀಫೆರನ ಮಗಳು ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ತರುವಾಯ ಜೋಸೆಫನು ಈಜಿಪ್ಟ್ ದೇಶಸಂಚಾರ ಹೊರಟನು.


ಆ ಬೊಂಬೆಗಳೆಲ್ಲ ಬಗ್ಗಿ ಕುಗ್ಗಿಹೋಗಿವೆ ಭಾರವನ್ನು ನೀಗಿಸಲು ಅವು ನಿಶ್ಯಕ್ತವಾಗಿವೆ ತಾವೆ ಸೆರೆಮನೆ ಸೇರಿಹೋಗಿವೆ.


ಅವನು ಈಜಿಪ್ಟಿನ ದೇವತೆಗಳ ಆಲಯಗಳಿಗೆ ಬೆಂಕಿ ಹೊತ್ತಿಸುವನು. ಅವುಗಳನ್ನು ಸುಟ್ಟು ಆ ದೇವತೆಗಳನ್ನು ಸೆರೆಗೊಯ್ಯುವನು. ಕುರುಬನು ತನ್ನ ಕಂಬಳಿಯನ್ನು ಸೋಸುವಂತೆ ಅವನು ಈಜಿಪ್ಟನ್ನು ಸೋಸುವನು.


ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನೋ ಎಂಬ ನಗರದಲ್ಲಿನ ಅಮೋನ್ ದೇವತೆಯನ್ನು, ಫರೋಹನನ್ನು, ಈಜಿಪ್ಟನ್ನು, ಈಜಿಪ್ಟಿನ ದೇವತೆಗಳನ್ನೂ ಅಲ್ಲಿನ ಅರಸರನ್ನೂ ದಂಡಿಸುವೆನು. ಹೌದು, ಫರೋಹನನ್ನೂ ಅವನಲ್ಲಿ ನಂಬಿಕೆ ಇಟ್ಟವರನ್ನೂ ದಂಡಿಸುವೆನು.


ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲುಕಂಬಗಳನ್ನು ಕೆಡಹುವನು.


ಅವರ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಈಜಿಪ್ಟಿಗೆ ಹಿಂದಿರುಗುವನು. ಕೆಲವು ವರ್ಷಗಳ ತನಕ ಉತ್ತರರಾಜನ ಗೊಡವೆಗೆ ಹೋಗನು.


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


“ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ.


ಆ ಕೊಡದಿಂದ ಕುಡಿದ ಮತ್ತಿತರರು ಇವರು: ಈಜಿಪ್ಟಿನ ಅರಸ ಫರೋಹನು ಅವನ ಸೇವಕರು, ಮಂತ್ರಿಗಳು, ಎಲ್ಲ ಪ್ರಜೆಗಳು ಮತ್ತು ಅಲ್ಲಿನ ವಿದೇಶೀಯರು;


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್‍ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.


ಓನಿನ ಮತ್ತು ಪೀಬೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು